ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ.ಆ.19: ತುರುವನೂರು ರಸ್ತೆಯಲ್ಲಿರುವ ಶ್ರೀ ಪ್ರಸನ್ನ ವೆಂಕರಮಣ ಸ್ವಾಮಿ ದೇವಸ್ಥಾನವು ಮುಜರಾಯಿ ಅಧಿಸೂಚಿತ ದೇವಸ್ಥಾನವಾಗಿದೆ.
ಭೀಮಾರೆಡ್ಡಿ ಬಿನ್ ಲಕ್ಷ್ಮಣ ಎಂಬ ಭಕ್ತರು ತಮ್ಮ ಸ್ವಂತ ಖರ್ಚಿನಲ್ಲಿ ದೇವಸ್ಥಾನದ ಅವರಣದಲ್ಲಿ ಸಮುದಾಯ ಭವನವನ್ನು ನಿರ್ಮಾಣ ಮಾಡಿದ್ದಾರೆ. ಇದನ್ನು ಭಕ್ತಾದಿಗಳ ಉಪಯೋಗಕ್ಕಾಗಿ ಮುಜರಾಯಿ ಇಲಾಖೆ ವಶಕ್ಕೆ ದೇಣಿಗೆ ರೂಪದಲ್ಲಿ ನೀಡಿದ್ದಾರೆ.
ಈ ಸಮುದಾಯ ಭವನ ಲೋಕಾರ್ಪಣೆ ಸುಸಂದರ್ಭ ಹಾಗೂ ಶಾವಣ ಮಾಸದ ಹಿನ್ನಲೆಯಲ್ಲಿ ಆಗಸ್ಟ್ 27 ಹಾಗೂ 28 ರಂದು ಪ್ರಸನ್ನ ವೆಂಕಟರಮಣ ದೇವಸ್ಥಾನಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಲೊಳ್ಳಲಾಗಿದೆ.
ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ಕಲ್ಯಾಣೋತ್ಸವ ಹೋಮ,ವಿಶೇಷ ಪೂಜೆ ಮತ್ತು ಸಮುದಾಯ ಭವನ ಲೋಕಾರ್ಪಣೆ pic.twitter.com/vsN2tmIJSZ
— suddione-kannada News (@suddione) August 19, 2023
ಆಗಸ್ಟ್ 27 ರಂದು ಹೋಮ ಹಾಗೂ ವಿಶೇಷ ಪೂಜೆ ನಡೆಸಲಾಗುವುದು. ಆಗಸ್ಟ್ 28 ರಂದು ಶ್ರೀ ಪ್ರಸನ್ನ ವೆಂಕರಮಣ ಸ್ವಾಮಿ ಕಲ್ಯಾಣೋತ್ಸವ ನಡೆಯಲಿದೆ. ಭಕ್ತಾಧಿಗಳು ಹಾಗೂ ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕು.
ಆಗಸ್ಟ್ 29 ರಿಂದ ಸಮುದಾಯ ಭವನದಲ್ಲಿ ಕಾರ್ಯಕ್ರಮಗಳನ್ನು ನಡೆಸಲು ಸಾರ್ವಜನಿಕರು ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.