Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ಆಯ್ತು, ಮುಂದಿನ ದಿನಗಳಲ್ಲಿ ಶ್ರೀ ಕೃಷ್ಣನ ದೇವಾಲಯ ನಿರ್ಮಾಣ : ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

---Advertisement---

 

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.22 : ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಮರ್ಯಾದಾ ಪುರುಷ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ರಾಮನಾಮ ಸ್ಮರಣೆ ಮಾಡಲಾಯಿತು.

ವಿಶ್ವಹಿಂದೂ ಪರಿಷತ್-ಭಜರಂಗದಳದಿಂದ ಮೆದೇಹಳ್ಳಿ ರಸ್ತೆಯಲ್ಲಿರುವ ಅಂಡರ್ ಬ್ರಿಡ್ಜ್‍ನಲ್ಲಿ ಶ್ರೀರಾಮನ ಬೃಹಧಾಕಾರವಾದ ಫೋಟೋಗೆ ಪೂಜೆ ಸಲ್ಲಿಸಿ ನಂತರ ಲಡ್ಡು ವಿತರಿಸಲಾಯಿತು.

ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಶ್ರೀರಾಮನ ಫೋಟೋಗೆ ಪೂಜೆ ಸಲ್ಲಿಸಿ ಮಾತನಾಡುತ್ತ ದೇಶದ ಪ್ರಧಾನಿ ನರೇಂದ್ರಮೋದಿರವರು ಭಾರತೀಯರ ಆಸೆಯಂತೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರವನ್ನು ಕಡಿಮೆ ಅವಧಿಯಲ್ಲೆ ನಿರ್ಮಿಸಿ ಲೋಕಾರ್ಪಣೆಗೊಳಿಸುತ್ತಿರುವುದು ಭಾರತದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಕೇವಲ ಭಾರತದಲ್ಲಷ್ಟೆ ಅಲ್ಲ ವಿದೇಶಗಳಲ್ಲಿರುವ ಕನ್ನಡಿಗರು ರಾಮ ಮಂದಿರ ನಿರ್ಮಾಣದಿಂದಾಗಿ ಖುಷಿ ಪಡುವಂತಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ರಾಮ ಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ನಯಾ ಪೈಸೆಯನ್ನು ಬಳಸಿಲ್ಲ. ಭಕ್ತರು ನೀಡಿದ ಹಣದಿಂದಲೆ ರಾಮ ಮಂದಿರ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಕೃಷ್ಣನ ದೇವಾಲಯವನ್ನು ನಿರ್ಮಾಣ ಮಾಡಲಾಗುವುದು ಎಂದರು.

ಮೊಗಲರ ಕಾಲದಲ್ಲಿ ಭಾರತದಲ್ಲಿ ಹಿಂದೂ ದೇವಾಲಯಗಳು ದಾಳಿಗೆ ಒಳಪಟ್ಟಿದ್ದು, ಅಂತಹ ಎಲ್ಲಾ ದೇವಾಲಯಗಳನ್ನು ನಿರ್ಮಾಣ ಮಾಡಲಾಗುವುದು. ನಮ್ಮ ದೇಶದ ಪ್ರಧಾನಿ ಮೋದಿರವರು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿಸುವ ಮೂಲಕ ಭಾರತದ ಸಂಸ್ಕøತಿಯನ್ನು ಎತ್ತಿಹಿಡಿದಿದ್ದಾರೆಂದು ಗುಣಗಾನ ಮಾಡಿದರು.

ಹದಿನಾರು ರಾಜ್ಯಗಳಲ್ಲಿ ರಜೆ ಘೋಷಿಸಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಗೆ ಗೌರವ ಸಲ್ಲಿಸಲಾಗಿದೆ. ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ರಜೆ ಘೋಷಿಸಿಲ್ಲ. ವಿರೋಧ ಪಕ್ಷದವರು ಇಲ್ಲ ಸಲ್ಲದ ಅಪವಾದ ಮಾಡುತ್ತಿರುವುದರಲ್ಲಿ ಅರ್ಥವಿಲ್ಲ. ತಮಿಳುನಾಡಿನಲ್ಲಿ ಎಲ್ಲಿಯೂ ಶಾಮಿಯಾನ ಹಾಕಿ ಶ್ರೀರಾಮನ ಪೂಜೆ ನಡೆಸಬಾರದೆಂದು ಜನತೆಯಲ್ಲಿ ಭಯದ ವಾತಾವರಣ ನಿರ್ಮಿಸಲಾಗಿದೆ ಎಂದು ಜಿ.ಹೆಚ್.ತಿಪ್ಪಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ. ಮಾಜಿ ಜಿಲ್ಲಾಧ್ಯಕ್ಷ ಜಿ.ಎಂ.ಸುರೇಶ್, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಭದ್ರಿನಾಥ್, ನಗರಸಭೆ ಸದಸ್ಯಸ ಸುರೇಶ್, ಭಜರಂಗದಳ ನಗರ ಸಂಚಾಲಕ ರಂಗನಾಥ್, ವಿಶ್ವಹಿಂದೂ ಪರಿಷತ್ ಸಹ ಕಾರ್ಯದರ್ಶಿ ಕೇಶವ್, ಡಾ.ಸಿದ್ದಾರ್ಥ, ಭಾನುಮೂರ್ತಿ ಈ ಸಂದರ್ಭದಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment