ನ.08 ಮತ್ತು 09 ರಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಜಿಲ್ಲಾ ಪ್ರವಾಸ

suddionenews
1 Min Read

ಚಿತ್ರದುರ್ಗ, (ನವೆಂಬರ್.06) : ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ನವೆಂಬರ್ 08 ಮತ್ತು 09 ರಂದು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರು  ನವೆಂಬರ್ 08ರಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನಿಂದ ರಸ್ತೆ ಮೂಲಕ ಮೊಳಕಾಲ್ಮೂರಿಗೆ ಆಗಮಿಸಿ, ಮಧ್ಯಾಹ್ನ 12 ಗಂಟೆಗೆ ಮೊಳಕಾಲ್ಮೂರು ಪಟ್ಟಣದಲ್ಲಿ ಡಿಎಂಎಫ್ ಅನುದಾನದಲ್ಲಿ ಅಂಗವಿಕಲರಿಗೆ 100 ದ್ವಿಚಕ್ರ ವಾಹನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಧ್ಯಾಹ್ನ 2 ಗಂಟೆಗೆ ಚಳ್ಳಕೆರೆ ತಾಲ್ಲೂಕಿನ ಎನ್. ದೇವರಹಳ್ಳಿ ಗ್ರಾಮದಲ್ಲಿ ಒಎಸ್‍ಎಎಟಿ ವತಿಯಿಂದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ  ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ 4 ತರಗತಿ ಕೊಠಡಿಗಳು ಮತ್ತು ಅಡುಗೆ ಕೋಣೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.

ಸಂಜೆ 4.30ಕ್ಕೆ ಚಿತ್ರದುರ್ಗ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ಬುಡಕಟ್ಟು ಉತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಚಿತ್ರದುರ್ಗದಲ್ಲಿ ವಾಸ್ತವ್ಯ ಮಾಡುವರು.

ನವೆಂಬರ್ 9ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗದಿಂದ ರಸ್ತೆ ಮೂಲಕ ಹರಿಹರ ತಾಲ್ಲೂಕು ರಾಜನಹಳ್ಳಿಗೆ ಪ್ರಯಾಣ ಬೆಳೆಸಿ, ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಹಮ್ಮಿಕೊಂಡಿರುವ ವಾಲ್ಮೀಕಿ ಜಾತ್ರೆ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸುವರು.

ಮಧ್ಯಾಹ್ನ 3.30ಕ್ಕೆ ರಾಜನಹಳ್ಳಿಯಿಂದ ಚಿತ್ರದುರ್ಗಕ್ಕೆ ಆಗಮಿಸಿ, ಸಂಜೆ 4.30ಕ್ಕೆ ಚಿತ್ರದುರ್ಗ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ನಡೆಯುವ ರಾಜ್ಯಮಟ್ಟದ ಬುಡಕಟ್ಟು ಉತ್ಸವದಲ್ಲಿ ಭಾಗವಹಿಸಲಿದ್ದಾರೆ ಸಂಜೆ 6 ಗಂಟೆಗೆ ಚಿತ್ರದುರ್ಗದಿಂದ ಬಳ್ಳಾರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *