Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶರಣ ಸಂಸ್ಕೃತ ಉತ್ಸವ-2023 ರ ಗೌರವಾಧ್ಯಕ್ಷರಾಗಿ ಅಥಣಿಯ ಶ್ರೀ ಗಚ್ಚಿನಮಠದ ಶ್ರೀ ಶಿವಬಸವ ಸ್ವಾಮೀಜಿ‌ ಆಯ್ಕೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆ. 13 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ನಡೆಯಲಿರುವ ಶರಣ ಸಂಸ್ಕೃತಿ ಉತ್ಸವ-2023ರ ಗೌರವಾಧ್ಯಕ್ಷರನ್ನಾಗಿ ಅಥಣಿಯ ಶ್ರೀ ಗಚ್ಚಿನಮಠದ ಶ್ರೀ ಶಿವಬಸವ ಸ್ವಾಮಿಗಳವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಆಡಳಿತಾಧಿಕಾರಿ ಶ್ರೀಮತಿ ಬಿ.ಎಸ್. ರೇಖಾ ಹಾಗೂ ಶ್ರೀ ಬಸವಪ್ರಭು ಸ್ವಾಮಿಗಳವರ ಅಧ್ಯಕ್ಷತೆಯಲ್ಲಿ ಶ್ರೀಮಠದಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ಬಾರಿಯ ಶರಣಸಂಸ್ಕøತಿ ಉತ್ಸವವನ್ನು ದಿ. 21-10-2023 ರಿಂದ 25-10-2023ರವರೆಗೆ ನಡೆಸಲು ತೀರ್ಮಾನಿಸಲಾಯಿತು.

ಕಾರ್ಯಕ್ರಮದ ವಿವರಗಳನ್ನು ಮುಂದಿನ ಸಭೆಯಲ್ಲಿ ಚರ್ಚಿಸಲು ಸಭೆ ತೀರ್ಮಾನಿಸಿತು. ಸಭೆಯಲ್ಲಿ ಕಾರ್ಯನಿರ್ವಹಣಾಧಿಕಾರಿ ಎಂ.ಭರತ್‍ಕುಮಾರ್, ಬ್ಯಾಡಗಿ ವಿರಕ್ತಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು, ತಿಳುವಳ್ಳಿಯ ಶ್ರೀ ಬಸವ ನಿರಂಜನ ಸ್ವಾಮಿಗಳು, ಶ್ರೀಮಠದ ವ್ಯವಸ್ಥಾಪಕ ಆರ್. ಲಿಂಗರಾಜ್ ಇದ್ದರು. ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾಗಿ ಆಯ್ಕೆಯಾದ ಶ್ರೀಗಳನ್ನು ಸನ್ಮಾನಿಸಲಾಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...