ಏಕಾದಶಿಯಂದೇ ಲಿಂಗೈಕ್ಯರಾದ ಸಿದ್ದೇಶ್ವರ ಸ್ವಾಮೀಜಿ : ಸ್ಮಾರಕ‌ ಮಾಡದಂತೆ 2014ರಲ್ಲೇ ವಿಲ್..!

suddionenews
1 Min Read

 

ವಿಜಯಪುರ : ಕಳೆದ ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಇಂದು ಸಂಜೆ 6.05 ನಿಮಿಷಕ್ಕೆ ಲಿಂಗೈಕ್ಯರಾಗಿದ್ದು, ರಾತ್ರಿ 10 ಗಂಟೆಗೆ ಡಿಸಿ ವಿಜಯಮಾಂತೇಶ ದಾನಮ್ಮ ಅವರು ಸುದ್ದಿಗೋಷ್ಟಿ ನಡೆಸಿ ಅಧಿಕೃತ ಮಾಹಿತಿ ತಿಳಿಸಿದ್ದಾರೆ.

ಸರ್ಕಾರಿ ಗೌರವಗಳೊಂದಿಗೆ, ಅಂತಿಮ ವಿಧಿ ವಿಧಾನಗಳ ಮೂಲನ ಅಂತಿಮ ಸಂಸ್ಕಾರ ನಡೆಸಲು ಸಿಎಂ ಬಸವೆಅಜ್ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ನಾಳೆ ವಿಜಯಪುರದ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಸುಕಿನ ಜಾವ 5 ಗಂಟೆಗೆ ಮಠದ ಆವರಣದಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಇನ್ನು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3ರ ತನಕ ಸೈನಿಕ ಶಾಲೆಯಲ್ಲಿ ಸಾರ್ವಜನಿಕರಿಗಾಗಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ ವೇಳೆಗೆ ಸರ್ಕಾರಿ ಗೌರವ ಸಲ್ಲಿಸಿ 5 ಗಂಟೆಗೆ ಮಠದ ಆವರಣದಲ್ಲಿಯೇ ಅಂತ್ಯ ಸಂಸ್ಕಾರ ನಡೆಯಲಿದೆ. ನಾಳಿನ ಸ್ವಾಮೀಜಿ ಅಂತಿಮ ಸಂಸ್ಕಾರದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಜಗದೀಶ್ ಶೆಟ್ಟರ್ ಭಾಗಿಯಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇನ್ನು ಸ್ವಾಮೀಜಿಗಳು ತಾವೂ ಲಿಂಗೈಕ್ಯರಾದ ಬಳಿಕ ಏನು ಮಾಡಬೇಕು, ಮಾಡಬಾರದು ಎಂಬುದನ್ನು ಮಠದವರ ಬಳಿ 2014ರಲ್ಲಿಯೇ ಚರ್ಚೆ ನಡೆಸಿದ್ದಾರೆ. ಈ ಸಂಬಂಧ ವಿಲ್ ಕೂಡ ಬರೆದಿಟ್ಟಿದ್ದಾರೆ. ದೇಹವನ್ನು ಮಣ್ಣು ಮಾಡುವಂತಿಲ್ಲ ಅಗ್ನಿ ಸ್ಪರ್ಶ ಮಾಡಬೇಕು. ಚೀತಾ ಭಸ್ಮವನ್ನು ನದಿ ಅಥವಾ ಸಮುದ್ರದಲ್ಲಿ ಬಿಡಬೇಕು. ಸ್ಮಾರಕವನ್ನು ಕಟ್ಟುವಂತಿಲ್ಲ ಎಂದು ವಿಲ್ ಬರೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *