Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

 ಈ ಕಾರಣಕ್ಕಾಗಿ ಶೃಂಗೇರಿ ಕಾಂಗ್ರೆಸ್ ಶಾಸಕ ಟಿ ಡಿ‌ ರಾಜೇಗೌಡ ಕಣ್ಣೀರು

---Advertisement---

ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ನಡೆದ ಜನಾಂದೋಲನ ಸಮಾವೇಶದಲ್ಲಿ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಕಣ್ಣೀರಿಟ್ಟಿದ್ದಾರೆ. ತಮ್ಮ ಕುಟುಂಬವನ್ನು ಬೀದಿಗೆ ತಂದು ನಿತ್ಯ ಕೋರ್ಟ್ಗೆ ಅಲೆದಾಡುವ ಸ್ಥಿತಿ ನಿರ್ಮಿಸಿದ್ದಾರೆ ಎಂದು ಆರೋಪಿಸಿ ಶಾಸಕರು ಕಣ್ಣೀರಿಟ್ಟಿದ್ದಾರೆ.

ನನ್ನ ಮನೆಯನ್ನು ಹಾಳು ಮಾಡಿದ್ದೀರಿ, ಅನ್ಯಾಯ ಮಾಡಿದ್ದೀರಿ , ನಾನು ಸಾಲ ಮಾಡಿದ್ದೇನೆ, ನಾನು ಜನಕ್ಕೆ ಅನ್ಯಾಯವನ್ನು ಮಾಡಿಲ್ಲ, ನಾನು ಈ ಸಭೆ ಮೂಲಕ ಒಂದು ಘೋಷಣೆ ಮಾಡುತ್ತೇನೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ, ಯಾರಾದರೂ ನಿಲ್ಲಲಿ ಆದರೆ ಕೆಟ್ಟ ಮನಸ್ಥಿತಿಯ ವ್ಯಕ್ತಿ ಮತ್ತೆ ಶಾಸಕನಾಗಬಾರದು ಶಾಸಕರಾದರೆ ಈ ಕ್ಷೇತ್ರಕ್ಕೆ ದೊಡ್ಡ ಮಾರಕ, ಯಾರ ಮನೆ ಹೆಣ್ಣು ಮಕ್ಕಳನ್ನು ಏನ್ ಮಾಡ್ತಾರೋ ಗೊತ್ತಿಲ್ಲ ಎಂದು ಮಾಜಿ ಶಾಸಕ ಡಿ ಎನ್ ಜೀವರಾಜ್ ಹೆಸರು ಹೇಳದೆಯೇ ಹಾಲಿ ಶಾಸಕ ರಾಜೇಗೌಡ ಕಣ್ಣೀರು ಹಾಕಿದ್ದಾರೆ.

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡುತ್ತಿದ್ದಾರೆ, ನಾನು ಈ ಸಮಾವೇಶದ ಮೂಲಕ ಒಂದು ಘೋಷಣೆ ಮಾಡುತ್ತಿದ್ದೇನೆ, ಈ ಕ್ಷೇತ್ರದಲ್ಲಿ ಜನರಿಗೆ ವಿನಾಕಾರಣ ತೊಂದರೆ ಕೊಡುತ್ತಾ, ಮಹಿಳೆಯರಿಗೆ ತೊಂದರೆ ಕೊಟ್ಟಿರುವುದನ್ನು ಮನದಟ್ಟು ಮಾಡಿಕೊಂಡು ಚುನಾವಣೆಗೆ ಸ್ಪರ್ಧಿಸಲ್ಲ ಅಂತ ಘೋಷಣೆ ಮಾಡಲಿ ಎಂದು ಜೀವರಾಜ್ ಹೆಸರು ಹೇಳದೇ ಶಾಸಕ ರಾಜೇಗೌಡ ಸವಾಲು ಹಾಕಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now