Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ವಿಚಾರ : ಹೈಕೋರ್ಟ್ ನಿಂದ ಮಹತ್ವದ ಆದೇಶ

---Advertisement---

ಚಿಕ್ಕಮಗಳೂರು: 2023ರಲ್ಲಿ ನಡೆದಿದ್ದ ಶೃಂಗೇರಿ ವಿಧಾನಸಭಾ ಚುನಾವಣೆಯ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಅಂಚೆ ಮತಗಳ ಮರು ಎಣಿಕೆಗೆ ಅಂತಿಮವಾಗಿ ದಿನಾಂಕವನ್ನ ನಿಗದಿ ಮಾಡಿದೆ. ಹೈಕೋರ್ಟ್ ಆದೇಶದ ಹಿನ್ನಲೆಯಲ್ಲಿ ಮೇ 2ರಂದು ಮರು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಮೇ 2ರ ಬೆಳಗ್ಗೆ 8 ಗಂಟೆಗೆ ಚಿಕ್ಕಮಗಳೂರಿನ ಐಡಿಎಸ್ಜಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಚುನಾವಣಾಧಿಕಾರಿ ಗೌರವ ಶೆಟ್ಟಿ ಅವರ ನೇತೃತ್ವದಲ್ಲಿ ಈ ಪ್ರಕ್ರಿಯೆ ನಡೆಯಲಿದೆ. ಜೊತೆಗೆ ಅವರಿಗೆ ನಾಲ್ವರು ಸಹಾಯಕ ಚುನಾವಣಾಧಿಕಾರಿಗಳು ಸಾಥ್ ನೀಡಲಿದ್ದಾರೆ. ಇನ್ನು ಮರು ಮತ ಎಣಿಕೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಜಿಲ್ಲಾಡಳಿ ಸಿದ್ಧತೆ ನಡೆಸಿದೆ. ಇಡೀ ಎಣಿಕೆ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಹಾಲಿ ಶಾಸಕ ಟಿಡಿ ರಾಜೇಗೌಡ ಹಾಗೂ ಮಾಜಿ ಶಾಸಕ ಜೀವರಾಜ್ ಅವರ ಪರ ಏಜೆಂಟರು ಮತ ಎಣಿಕೆ ವೇಳೆ ಹಾಜರಿರುತ್ತಾರೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡ ಅವರು ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಂತರದಿಂದ ಜಯಗಳಿಸಿದ್ದರು. ಆ ಚುನಾವಣೆಯಲ್ಲಿ ಒಟ್ಟು 2,811 ಅಂಚೆ ಮತಗಳು ಚಲಾವಣೆಯಾಗಿದ್ದವು. ಅವುಗಳಲ್ಲಿ 279 ಅಂಚೆ ಮತಗಳನ್ನು ತಿರಸ್ಕರಿಸಲಾಗಿತ್ತು. ಈ ತಿರಸ್ಕೃತ ಮತಗಳ ಬಗ್ಗೆ ಮಾಜಿ ಶಾಸಕ ಜೀವರಾಜ್ ಆಕ್ಷೇಪ ವ್ಯಕ್ತಪಡಿಸಿದ್ದರು.

ಮರು ಮತ ಎಣಿಕೆ ಮಾಡಬೇಕೆಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಪ್ರಿಲ್ 6ರಂದು ತಿರಸ್ಕೃತ ಅಂಚೆ ಮತಗಳನ್ನು ಮರು ಎಣಿಕೆ ಮಾಡುವಂತೆ ಐತಿಹಾಸಿಕ ಆದೇಶ ನೀಡಿತ್ತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now