ಚಿತ್ರದುರ್ಗದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿಗೆ ಜಿಲ್ಲೆಯ ಮೊದಲ ಮೂರು ಸ್ಥಾನಗಳ ಗರಿ”

1 Min Read

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 08 :ದ್ವಿತೀಯ ಪಿಯು ಫಲಿತಾಂಶದಲ್ಲಿ ಚಿತ್ರದುರ್ಗದ  ಎಸ್.‌ ಆರ್.‌ ಎಸ್.‌ ಪಿಯು ಕಾಲೇಜು ಜಿಲ್ಲೆಯ ಮೊದಲ ಮೂರು ಸ್ಥಾನಗಳನ್ನು ತನ್ನ ಮುಡಿಗೇರಿಸಿಕೊಂಡಿದೆ.

ಕಾಲೇಜಿನ ವಿದ್ಯಾರ್ಥಿನಿ ಕುಮಾರಿ.‌ ಇಶಿತಾ ಬಿ.ಎನ್ 600 ಕ್ಕೆ 592 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಕ್ರಮವಾಗಿ ಸಾಕ್ಷಿ ಎಸ್.‌ ಬಿ., ವಿಜೇತ ರೆಡ್ಡಿ ಬಿ.ಸಿ. ಮತ್ತು ರಿಯಾ ಎಸ್.‌ ಕೊಠಾರಿ 589, 589 ಹಾಗೂ 588 ಅಂಕಗಳನ್ನು ಪಡೆದು ಜಿಲ್ಲೆಗೆ ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಪಡೆದುಕೊಳ್ಳುವುದರ ಮೂಲಕ ಜಿಲ್ಲೆಯ ಮೊದಲ ಮೂರು ಸ್ಥಾನಗಳನ್ನು ಎಸ್.‌ ಆರ್.‌ ಎಸ್‌ ಕಾಲೇಜಿನ ವಿದ್ಯಾರ್ಥಿಗಳೆ ಪಡೆದುಕೊಂಡಿದ್ದಾರೆ.

ವಿಷಯವಾರು 53 ವಿದ್ಯಾರ್ಥಿಗಳು 100ಕ್ಕೆ 100 ಅಂಕಗಳನ್ನು ಪಡೆದುಕೊಂಡಿದ್ದಾರೆ. ಕಾಲೇಜಿನ 444 ವಿದ್ಯಾರ್ಥಿಗಳು ಶೇ. 90 ಕ್ಕೂ ಅಧಿಕ ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಜಿಲ್ಲೆಗೆ ಹಾಗೂ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಬಿ.ಎ.‌ ಲಿಂಗಾರೆಡ್ಡಿ, ಕಾರ್ಯದರ್ಶಿಗಳಾದ ಶ್ರೀಮತಿ. ಸುಜಾತ ಲಿಂಗಾರೆಡ್ಡಿ, ಉಪಾಧ್ಯಕ್ಷರು, ಆಢಳಿತಾಧಿಕಾರಿಗಳು, ಪ್ರಾಂಶುಪಾಲರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks