ದಾವಣಗೆರೆ: ಸಿಎಂ ಸಿದ್ದರಾಮಯ್ಯ ಅವರ ಮುಂದೆ ಎಸ್ ಎಸ್ ಮಲ್ಲಿಕಾರ್ಜುನ ಅವರು ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಸಚಿವ ಸ್ಥಾನದಿಂದ ತಮ್ಮನ್ನ ಮುಕ್ತಿಗೊಳಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ವ್ಯವಹಾರಿಕ ಒತ್ತಡ ಹಾಗೂ ಕ್ಷೇತ್ರದ ಕೆಲಸಗಳು ಹೆಚ್ಚಾಗಿರುವ ಹಿನ್ನೆಲೆ ಸಚಿವ ಸ್ಥಾನದಿಂದ ಮುಕ್ತಿ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕಳೆದ ವಾರವೇ ಸಿಎಂ ಎದುರ ಈ ವಿಚಾರವನ್ನ ಪ್ರಸ್ತಾಪ ಮಾಡಿದ್ದಾರಂತೆ.
ಶಾಮನೂರು ಶಿವಶಂಕರಪ್ಪ ಅವರು ನಿಧನರಾದ ಬೆನ್ನಲ್ಲೇ ದಾವಣಗೆರೆ ದಕ್ಷಿಣ ಕ್ಷೇತ್ರ ತೆರವಾಗಿದೆ. ಆ ಕ್ಷೇತ್ರದ ಉಪಚುನಾವಣೆಗೂ ಪ್ಲ್ಯಾನ್ ಮಾಡಲಾಗುತ್ತಿದೆ. ಆದರೆ ಇದರ ಬೆನ್ನಲ್ಲೇ ಎಸ್ ಎಸ್ ಮಲ್ಲಿಕಾರ್ಜುನ ಅವರ ಈ ನಡೆ ಮಹತ್ವವನ್ನ ಪಡೆದುಕೊಂಡಿದೆ. ಮಲ್ಲಿಕಾರ್ಜುನ್ ಅವರು ತಂದೆಯಿಂದ ತೆರವಾದ ಕ್ಷೇತ್ರಕ್ಕೆ ತಮ್ಮ ಪುತ್ರನಿಗೆ ಟಿಕೆಟ್ ಕೇಳುತ್ತಾ ಇದ್ದಾರೆ. ಹೀಗಾಗಿ ರಾಜೀನಾಮೆಯ ದಾಳವನ್ನ ಉರುಳಿಸಿದ್ದಾರಾ ಎಂಬ ಅನುಮಾನ ಎಲ್ಲರನ್ನು ಕಾಡ್ತಾ ಇದೆ.
ರಾಜ್ಯ ಸರ್ಕಾರದಲ್ಲಿ ಮಂತ್ರಿಗಿರಿ ಬೇಕು ಎಂದು ಬೇಡಿಕೆ ಇರುವವರೇ ಜಾಸ್ತಿ. ಅಂತದ್ರಲ್ಲಿ ಮಲ್ಲಿಕಾರ್ಜುನ ಅವರು ರಾಜೀನಾಮೆ ಕೊಡ್ತೇನೆ, ಸಚಿವ ಸ್ಥಾನ ಬೇಡ ಎನ್ನುತ್ತಿರುವುದರ ಹಿಂದೆ ರಾಜಕೀಯದಾಟ ಇದೆಯಾ ಎಂಬ ಪ್ರಶ್ನೆ ಕಾಡದೆ ಇರಲಾರದು. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಪ್ರಾಬಲ್ಯ ಹೆಚ್ವಿದೆ. ಹೀಗಾಗಿ ಈ ಬಾರಿ ಮುಸ್ಲಿಂ ನಾಯಕರಿಗೆ ಟಿಕೆಟ್ ಕೊಡುವ ಬಗ್ಗೆ ಚಿಂತನೆ ನಡೆಸಿದೆ ಎನ್ನಲಾಗಿದೆ. ಮಲ್ಲಿಕಾರ್ಜುನ ಅವರ ಕುಟುಂಬ ಆ ಕ್ಷೇತ್ರದಲ್ಲಿ ಹಿಡಿತವನ್ನ ಹೊಂದಿದೆ. ಅದೇ ಕಾರಣಕ್ಕೆ ಮಗನಿಗೂ ಒಂದು ಟಿಕೆಟ್ ಕೊಡಿಸುವ ಪ್ರಯತ್ನ ಮಾಡಲಾಗ್ತಾ ಇದೆ. ಹೀಗಾಗಿ ಈ ರೀತಿಯಲ್ಲಿ ಡಿಮ್ಯಾಂಡ್ ಇಟ್ಟರ ಎಂಬ ಅನುಮಾನಗಳು ಶುರುವಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











