ಮಾರ್ಚ್ 18 ರಿಂದ ಏಪ್ರಿಲ್ 02 ರವರೆಗೆ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ : ನಿಷೇಧಾಜ್ಞೆ ಜಾರಿ

1 Min Read

ಸುದ್ದಿಒನ್, ಮಾ.16: ಜಿಲ್ಲೆಯಾದ್ಯಂತ ಮಾರ್ಚ್ 18 ರಿಂದ ಏಪ್ರಿಲ್ 02 ರವರೆಗೆ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ. ಸುಗಮ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಅನುವಾಗುವಂತೆ 84 ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ರ ಕಲಂ 163 ರ ಅಡಿಯಲ್ಲಿ ಈ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ. ವೆಂಕಟೇಶ್ ಆದೇಶಿಸಿದ್ದಾರೆ.

ಪರೀಕ್ಷಾ ದಿನಗಳಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ಜೆರಾಕ್ಸ್ ಅಂಗಡಿಗಳು ಮತ್ತು ಕಂಪ್ಯೂಟರ್ ಇಂಟರ್ನೆಟ್ ಕೇಂದ್ರಗಳನ್ನು ಕಡ್ಡಾಯವಾಗಿ ಮುಚ್ಚುವಂತೆ ಸೂಚಿಸಲಾಗಿದೆ.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ಫೋನ್ ಅಥವಾ ಇನ್ನಿತರೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ. ವೆಂಕಟೇಶ್ ಆದೇಶಿಸಿದ್ದಾರೆ.

Share This Article