Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆಯಿಂದ ಎಸ್ ಎಸ್ಎಲ್ ಸಿ ಪರೀಕ್ಷೆ-2 ಆರಂಭ: 1.15 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ

---Advertisement---

ಸುದ್ದಿಒನ್,ಬೆಂಗಳೂರು,ಮೇ.17: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-2 ನಾಳೆಯಿಂದ ಆರಂಭವಾಗಲಿದ್ದು, ಮೇ 25, 2026ರವರೆಗೆ ನಡೆಯಲಿದೆ. ಈ ಪರೀಕ್ಷೆಗಾಗಿ ರಾಜ್ಯಾದ್ಯಂತ ಒಟ್ಟು 358 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಈ ಬಾರಿ ಒಟ್ಟು 1,15,112 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಇವರಲ್ಲಿ 76,673 ವಿದ್ಯಾರ್ಥಿಗಳು ಹಾಗೂ 38,439 ವಿದ್ಯಾರ್ಥಿನಿಯರು ಸೇರಿದ್ದಾರೆ.  ರಾಜ್ಯದ ಒಟ್ಟು 13,798 ಶಾಲೆಗಳಿಂದ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಸಂಖ್ಯೆಯೇ ಹೆಚ್ಚಾಗಿದೆ.

ಸರ್ಕಾರಿ ಶಾಲೆಗಳು: 5,488 ಶಾಲೆಗಳಿಂದ ಒಟ್ಟು 55,403 ವಿದ್ಯಾರ್ಥಿಗಳು (35,957 ಬಾಲಕರು, 19,446 ಬಾಲಕಿಯರು).

ಅನುದಾನಿತ ಶಾಲೆಗಳು: 3,250 ಶಾಲೆಗಳಿಂದ ಒಟ್ಟು 31,436 ವಿದ್ಯಾರ್ಥಿಗಳು (21,157 ಬಾಲಕರು, 10,279 ಬಾಲಕಿಯರು).

ಅನುದಾನರಹಿತ ಶಾಲೆಗಳು: 5,060 ಶಾಲೆಗಳಿಂದ ಒಟ್ಟು 28,273 ವಿದ್ಯಾರ್ಥಿಗಳು (19,559 ಬಾಲಕರು, 8,714 ಬಾಲಕಿಯರು).

ಫಲಿತಾಂಶ ಉತ್ತಮಪಡಿಸಿಕೊಳ್ಳಲು ಸುವರ್ಣಾವಕಾಶ

ಈ ಬಾರಿಯ ಪರೀಕ್ಷೆಯಲ್ಲಿ ತಮ್ಮ ಹಳೆಯ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು (Improvement) ಒಟ್ಟು 11,881 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ಅಲ್ಲದೆ, 2025-26ನೇ ಸಾಲಿನಲ್ಲಿ ಹಾಜರಾತಿ ಕೊರತೆಯ (Shortage of Attendance) ಕಾರಣದಿಂದ ಪರೀಕ್ಷೆ-1ಕ್ಕೆ ಹಾಜರಾಗಲು ಸಾಧ್ಯವಾಗದ 7,658 ವಿದ್ಯಾರ್ಥಿಗಳು ಇದೀಗ ಪರೀಕ್ಷೆ-2ಕ್ಕೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಣಿ ಮಾಡಿಕೊಂಡಿದ್ದು, ಇವರಿಗೆ ಇದೊಂದು ಪ್ರಮುಖ ಅವಕಾಶವಾಗಿದೆ. ಪರೀಕ್ಷೆಗಳು ಸುಗಮವಾಗಿ ನಡೆಯಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now