Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಎಸ್‍ಎಸ್‍ಎಲ್‍ಸಿ ಪರೀಕ್ಷೆ :  ವಿದ್ಯಾರ್ಥಿಗಳಿಗೆ ಗುಲಾಬಿ ಹೂ, ಸಿಹಿ ನೀಡಿ ಪರೀಕ್ಷೆಗೆ ಸ್ವಾಗತಿಸಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್

---Advertisement---

ಚಿತ್ರದುರ್ಗ. ಮಾರ್ಚ್21:  ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ಶುಕ್ರವಾರ ಆರಂಭಗೊಂಡಿದ್ದು, ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ) ವಿಭಾಗದಲ್ಲಿ ಸ್ಥಾಪಿಸಿರುವ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಆಗಮಿಸಿದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಗುಲಾಬಿ ಹೂವು ಹಾಗೂ ಸಿಹಿ ನೀಡಿ ಸ್ವಾಗತಿಸಿ, ಶುಭ ಹಾರೈಸಿದರು.

 

ಬಳಿಕ ಮಾತನಾಡಿದ ಜಿಲ್ಲಾಧಿಕಾರಿಗಳು, ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ವಿದ್ಯಾರ್ಥಿ ಜೀವನದ ಒಂದು ಪ್ರಮುಖ ಘಟ್ಟವಾಗಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಇದೇ ಮಾರ್ಚ್ 21 ರಿಂದ ಪ್ರಾರಂಭವಾಗಿದ್ದು,  ಏಪ್ರಿಲ್ 04 ರವರೆಗೆ ನಡೆಯಲಿದ್ದು, ಈ ಪರೀಕ್ಷೆಯನ್ನು ಹಬ್ಬದಂತೆ ಆಚರಣೆ ಮಾಡಬೇಕು. ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು  ಯಾವುದೇ ಭಯಭೀತಿ ಇಲ್ಲದೇ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕು. ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಕಳೆದ ಆರು ತಿಂಗಳಿಂದಲೂ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.  ಜಿಲ್ಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಹಲವು ಪ್ರಯತ್ನಗಳನ್ನು ನಡೆಸಲಾಗಿದೆ.  ವಿದ್ಯಾರ್ಥಿಗಳು ಉತ್ಸಾಹ ಮತ್ತು ಆತ್ಮ ವಿಶ್ವಾಸದಿಂದ ಪರೀಕ್ಷೆ ಬರೆಯಬೇಕು.  ಹೀಗಾಗಿ ಇಂದು ಪರೀಕ್ಷಾ ಕೇಂದ್ರದಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿ, ಸಂತೋಷದಿಂದ ವಿದ್ಯಾರ್ಥಿಗಳನ್ನು ಸ್ವಾಗತಿಸಿ, ಶುಭ ಹಾರೈಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ,  ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್, ಪೌರಾಯುಕ್ತೆ ಎಂ.ರೇಣುಕಾ ಸೇರಿದಂತೆ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಇದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment