ಚಿತ್ರದುರ್ಗ. ಮಾರ್ಚ್21: ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ಶುಕ್ರವಾರ ಆರಂಭಗೊಂಡಿದ್ದು, ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ) ವಿಭಾಗದಲ್ಲಿ ಸ್ಥಾಪಿಸಿರುವ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಆಗಮಿಸಿದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಗುಲಾಬಿ ಹೂವು ಹಾಗೂ ಸಿಹಿ ನೀಡಿ ಸ್ವಾಗತಿಸಿ, ಶುಭ ಹಾರೈಸಿದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿಗಳು, ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ವಿದ್ಯಾರ್ಥಿ ಜೀವನದ ಒಂದು ಪ್ರಮುಖ ಘಟ್ಟವಾಗಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಇದೇ ಮಾರ್ಚ್ 21 ರಿಂದ ಪ್ರಾರಂಭವಾಗಿದ್ದು, ಏಪ್ರಿಲ್ 04 ರವರೆಗೆ ನಡೆಯಲಿದ್ದು, ಈ ಪರೀಕ್ಷೆಯನ್ನು ಹಬ್ಬದಂತೆ ಆಚರಣೆ ಮಾಡಬೇಕು. ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಯಾವುದೇ ಭಯಭೀತಿ ಇಲ್ಲದೇ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕು. ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಕಳೆದ ಆರು ತಿಂಗಳಿಂದಲೂ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಹಲವು ಪ್ರಯತ್ನಗಳನ್ನು ನಡೆಸಲಾಗಿದೆ. ವಿದ್ಯಾರ್ಥಿಗಳು ಉತ್ಸಾಹ ಮತ್ತು ಆತ್ಮ ವಿಶ್ವಾಸದಿಂದ ಪರೀಕ್ಷೆ ಬರೆಯಬೇಕು. ಹೀಗಾಗಿ ಇಂದು ಪರೀಕ್ಷಾ ಕೇಂದ್ರದಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿ, ಸಂತೋಷದಿಂದ ವಿದ್ಯಾರ್ಥಿಗಳನ್ನು ಸ್ವಾಗತಿಸಿ, ಶುಭ ಹಾರೈಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್, ಪೌರಾಯುಕ್ತೆ ಎಂ.ರೇಣುಕಾ ಸೇರಿದಂತೆ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಇದ್ದರು.
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28 : ನಗರದ ಐ.ಯು.ಡಿ.ಪಿ. ಲೇಔಟ್ ನ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಕರೆನ್ಸಿ ಚೆಸ್ಟ್ ಶಾಖೆಯಲ್ಲಿ…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 27 : ಎಲ್ಲೆಡೆ ಪರೀಕ್ಷೆಗಳು ಮುಗಿಯುವ ಹಂತಕ್ಕೆ ಬಂದಿವೆ. ಇನ್ನೇನೂ ಸದ್ಯದಲ್ಲೇ ಶಾಲಾ-ಕಾಲೇಜು ರಜೆ ಘೋಷಣೆ…
ಹಲವರಿಗೆ ಇದ್ದಕ್ಕಿದ್ದ ಹಾಗೇ ತಲೆ ನೋವು ಬರುತ್ತೆ. ಮಾತ್ರೆಗಳಿಗೆ ಅಂತವರು ಅಡಿಕ್ಟ್ ಆಗಿರುತ್ತಾರೆ. ಆದರೆ ಮಾತ್ರೆ ತೆಗೆದುಕೊಳ್ಳುವುದು ಸದಾ ಕಾಲ…
ಈ ರಾಶಿಯವರು ಕ್ಯಾಂಟೀನ್ ಬೇಕರಿ ಅಂತಹ ಸಣ್ಣ ಪುಟ್ಟ ವ್ಯಾಪಾರ ಪ್ರಾರಂಭಿಸಿ, ಶುಕ್ರವಾರದ ರಾಶಿ ಭವಿಷ್ಯ 28 ಮಾರ್ಚ್ 2025…
ಸುದ್ದಿಒನ್, ಹಿರಿಯೂರು, ಮಾರ್ಚ್. 27 : ಅಕ್ರಮ ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ಭಾಗಿಯಾಗಿದ್ದ ಇಬ್ಬರು ವ್ಯಕ್ತಿಗಳನ್ನು ಐಮಂಗಲ ಪೊಲೀಸರು…
ಬೆಂಗಳೂರು; ಇತ್ತೀಚೆಗಂತೂ ಕೊಲೆ ಕೇಸದ ಗಳನ್ನೇ ಹೆಚ್ಚಾಗಿಕೇಳ್ತಾ ಇದ್ದೀವಿ. ಅದರಲ್ಲೂಈ ರೀತಿಯ ಕೊಲೆಗಳು ಕೂಡ ಜಾಸ್ತಿ ಆಗ್ತಾ ಇದಾವೆ. ಇಂದು…