ಎಸ್ಎಸ್ಎಲ್ಸಿ ಪರೀಕ್ಷೆ ಮಕ್ಕಳ ಭವಿಷ್ಯಕ್ಕೆ ಬಹಳ ಮುಖ್ಯವಾದದ್ದು. ಇದು ಟರ್ನಿಂಗ್ ಪಾಯಿಂಟ್ ಅಂತಾನೇ ಹೇಳಬಹುದು. ಮಕ್ಕಳು ಕೂಡ ಎಸ್ಎಸ್ಎಲ್ಸಿ ಪರೀಕ್ಷೆಗೆ ಸಾಕಷ್ಟು ತಯಾರಿ ನಡೆಸಿರುತ್ತಾರೆ. ಇದೀಗ ಪರೀಕ್ಷೆಯ ಸಮಯವೂ ಹತ್ತಿರ ಬಂದಿದೆ. ನಾಳೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಮಾರ್ಚ್ 21 ರಿಂದ ಏಪ್ರಿಲ್ 4ರ ತನಕ ಪರೀಕ್ಷೆಗಳು ನಡೆಯಲಿವೆ.

ಮೊದಲ ದಿನ ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ತಮಿಳು, ಹಿಂದಿ, ಮರಾಠಿ, ಉರ್ದು, ಇಂಗ್ಲಿಷ್ ಪರೀಕ್ಷೆಗಳು ನಡೆಯಲಿವೆ. ಬೆಳಗ್ಗೆ 10 ರಿಂದ ಮಧ್ಯಾಹ್ನ 1.15ರವರೆಗೂ ಪರೀಕ್ಷೆ ನಡೆಯಲಿವೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯಬಾರದು ಎಂಬ ಕಾರಣಕ್ಕೆ ಪರೀಕ್ಷಾ ಕೇಂದ್ರದ ಒಳಗೆ ವೆಬ್ ಕಾಸ್ಟಿಂಗ್ ಹಾಗೂ ಹೊರಗೆ ಸಿಸಿಟಿವಿ ಕಣ್ಗಾವಲಿನಲ್ಲಿ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

ಸುಮಾರು 8,96,447 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ

ರಾಜ್ಯದ 2,818 ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ- 01 ನಡೆಯಲಿದೆ
4.61 ಲಕ್ಷದ ಬಾಲಕರು ಹಾಗೂ 4.34 ಲಕ್ಷದ ಬಾಲಕಿಯರು ಪರೀಕ್ಷೆ ಬರೆಯುತ್ತಿದ್ದಾರೆ
ರಾಜ್ಯದ ಎಲ್ಲ 15,881 ಪ್ರೌಢ ಶಾಲೆಗಳಲ್ಲಿ ಓದುವ SSLC ಮಕ್ಕಳು 8,42,817
38,091 ಪುನರಾವರ್ತಿತ ಮತ್ತು 15,539 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆಗೆ ಭಾಗಿ
ಇನ್ನು ಶನಿವಾರ ಕರ್ನಾಟಕ ಬಂದ್ ಮಾಡಲು ಕರೆಯನ್ನು ನೀಡಲಾಗಿದೆ. ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳು ಯಾವುದೇ ರೀತಿಯ ಭಯ ಪಡುವ ಅವಶ್ಯಕತೆ ಇಲ್ಲ. ಮೊದಲು ಪರೀಕ್ಷೆಗೆ ಚೆನ್ನಾಗಿ ತಯಾರಿ ಮಾಡಿಕೊಂಡು, ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ.

