Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಿಯುಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭ ಕೋರಿದ ಸಂಸದ ಗೋವಿಂದ ಕಾರಜೋಳ

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 28 : ಪರೀಕ್ಷೆಯನ್ನು ಯಾವುದೇ ಗೂಂದಲ, ಭಯ ಇಲ್ಲದೆ ಧೈರ್ಯದಿಂದ ಬರೆದು ಫಲಿತಾಂಶ ದಲ್ಲಿ ಚಿತ್ರದುರ್ಗ ಜಿಲ್ಲೆಯನ್ನು ಒಂದರಿಂದ ನಾಲ್ಕನೇ ಸ್ಥಾನದಲ್ಲಿ‌ತರುವಂತೆ ವಿದ್ಯಾರ್ಥಿಗಳಿಗೆ ಸಂಸದರಾದ ಗೋವಿಂದ ಕಾರಜೋಳ ಮನವಿ ಮಾಡಿದರು.

ಚಿತ್ರದುರ್ಗ ನಗರದ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಇಂದಿನಿಂದ ಪ್ರಾರಂಭವಾದ ದ್ವೀತಿಯ ಪಿಯು ಪರೀಕ್ಷೆ ಯನ್ನು ಬರೆಯಲು ಬಂದಿದ ವಿದ್ಯಾರ್ಥಿನಿಯರಿಗೆ ಶುಭ ಕೋರಿ ಮಾಧ್ಯಮದವರೋಂದಿಗೆ ಮಾತನಾಡಿದ ಅವರು ಮಕ್ಕಳಿಗೆ ದ್ವೀತಿಯ ಪಿಯು ಪರೀಕ್ಷೆ ಒಂದು ರೀತಿಯಲ್ಲಿ ತಿರುವಿನ ಘಟ್ಟವಾಗಿದೆ ಇದು ಮುಗಿದ ಮೇಲೆ ಸಿಇಟಿ ಬರೆಯುವುದರ ಮೂಲಕ ಮುಂದೆ ನಿಮ್ಮ ಬದುಕನ್ನು ರೂಪಿಸಿಕೋಳ್ಳ ಬೇಕಿದೆ. ಕಳೆದ ಬಾರಿ ಚಿತ್ರದುರ್ಗ ಜಿಲ್ಲೆ ಫಲಿತಾಂಶ ದಲ್ಲಿ ಬಹಳ ಹಿಂದೆ ಇತ್ತು ಆದರೆ ಈ ಬಾರಿ ಉತ್ತಮವಾದ ಫಲಿತಾಂಶವನ್ನು ತರುವಂತೆ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿ ಇದರಿಂದ ಚಿತ್ರದುರ್ಗ ಹಾಗೂ ನಿಮ್ಮ ಪೋಷಕ ರಿಗೂ ಸಹಾ ಹೆಸರು ಬರುತ್ತದೆ ಎಂದರು.

 

ಈ ಸಂದರ್ಭದಲ್ಲಿ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೋಡ್ಡಯ್ಯ, ಬಿಜೆಪಿ ಮಾಧ್ಯಮ ವಕ್ತಾರ ನಾಗರಾಜ ಬೇದ್ರೆ,ಯುವಮೋರ್ಚಾದ ಅರುಣ್ ಪರಿಕ್ಷಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now