Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್‍ಎಸ್‍ಎಲ್‍ಸಿ ಪರೀಕ್ಷಾ ಸಿದ್ಧತೆ : ಜನವರಿ 24 ರಂದು ಆಕಾಶವಾಣಿ ನೇರ ಫೋನ್ ಇನ್ ಕಾರ್ಯಕ್ರಮ

---Advertisement---

 

ಚಿತ್ರದುರ್ಗ.ಜ.21: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಉನ್ನತೀಕರಣದ ಹಿನ್ನಲೆಯಲ್ಲಿ ನುರಿತ ವಿಷಯ ತಜ್ಞರಿಂದ ವಿಷಯವಾರು ಪರೀಕ್ಷೆಗೆ ಸಂಬಂಧಿಸಿದ ಮಾಹಿತಿ ನೀಡಲು ಮತ್ತು ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಲು ನೇರ ಫೋನ್ ಇನ್ ಕಾರ್ಯಕ್ರಮ ರೂಪಿಸಲಾಗಿದೆ.

ಇದೇ ಜ.24ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ಆಕಾಶವಾಣಿಯ ನೇರ ಫೋನ್ ಇನ್ ಕಾರ್ಯಕ್ರಮದ ಚರ್ಚೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ.ಆರ್.ಮಂಜುನಾಥ್, ಶಿಕ್ಷಣಾಧಿಕಾರಿ ಬಿ.ಸಿ.ಸಿದ್ದಪ್ಪ, ಎಸ್.ಎಸ್.ಎಲ್.ಸಿ ನೋಡಲ್ ಅಧಿಕಾರಿ ಎನ್.ಆರ್. ತಿಪ್ಪೇಸ್ವಾಮಿ, ಶಿಕ್ಷಣ ಉಪಯೋಜನ ಸಮನ್ವಯಾಧಿಕಾರಿ ಸಿ. ವೆಂಕಟೇಶ್ ಹಾಗೂ ವಿಷಯ ಪರಿವೀಕ್ಷಕ ಕೆ.ಜಿ.ಪ್ರಶಾಂತ್ ಕೆ.ಜಿ ಭಾಗವಹಿಸುವರು.

2025ನೇ ಮಾರ್ಚ್ ಮಾಹೆಯಲ್ಲಿ ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಜಿಲ್ಲೆಯ ಎಲ್ಲಾ ಮಕ್ಕಳನ್ನು ಉತ್ತಮವಾಗಿ ತಯಾರಿ ಮಾಡಲು ಆಕಾಶವಾಣಿ ಮೂಲಕ ಎಸ್‍ಎಸ್‍ಎಲ್‍ಸಿ ಪೂರ್ವಭಾವಿ ಪರೀಕ್ಷಾ ಸಿದ್ಧತೆ, ಪ್ರಾಯೋಜಿತ ನೇರ ಪೋನ್ ಇನ್ ಸರಣಿ ಕಾರ್ಯಕ್ರಮ ಪ್ರತಿ ಬುಧವಾರ ಬೆಳಿಗ್ಗೆ  10 ರಿಂದ 11 ರವರೆಗೆ ಪ್ರಸಾರವಾಗುವುದು. ಈ ಸರಣಿ ಕಾರ್ಯಕ್ರಮವು ಇದೇ ಜನವರಿ 29 ರಿಂದ ಆರಂಭವಾಗಿ ಮಾರ್ಚ್ 19 ರವರೆಗೆ ಬಿತ್ತರವಾಗುವುದು.

ಈ ಸರಣಿ ಕಾರ್ಯಕ್ರಮವು 102.6 ಮೆಗಾ ಹಡ್ಜ್ಸ್‍ ಗಳ ತರಂಗಾಂತಗಳಲ್ಲಿ ಆಕಾಶವಾಣಿ ಚಿತ್ರದುರ್ಗ ಕೇಂದ್ರದಿಂದ ಪ್ರಸಾರವಾಗುವುದು. ಈ ಕಾರ್ಯಕ್ರಮವನ್ನು ಜಗತ್ತಿನಾದ್ಯಂತ Aakashavani Chitradurga Live streaming ಮತ್ತು prasara bharathi news on air app ನಲ್ಲಿ ಪ್ರಸಾರ ಸಮಯದಲ್ಲಿ ಕೇಳಬಹುದು ಎಂದು ಆಕಾಶವಾಣಿ ನಿಲಯದ ಕಾರ್ಯಕ್ರಮದ ಮುಖ್ಯಸ್ಥ ಎಸ್.ಆರ್. ಭಟ್ ಮತ್ತು ಪ್ರಸಾರ ಕಾರ್ಯ ಮುಖ್ಯಸ್ಥ ಡಿ.ಅರ್.ಶಿವಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment