Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

SSLC..PUC ಪರೀಕ್ಷಾ ದಿನಾಂಕ ಪ್ರಕಟ

---Advertisement---

ಬೆಂಗಳೂರು: ಎಸ್ಎಸ್ಎಲ್ಸಿ ಹಾಗೂ ಪಿಯು ವಿದ್ಯಾರ್ಥಿಗಳ ಜೀವನದ ಬಹಳ ಪ್ರಮುಖ ಘಟ್ಟವಾಗಿದೆ. ಹೀಗಾಗಿ ಪೋಷಕರು ಕೂಡ ತುಂಬಾನೇ ಕಷ್ಟಪಟ್ಟು ಮಕ್ಕಳಿಗಾಗಿ ಪರೀಕ್ಷಾ ಸಮಯದಲ್ಲಿ ಕಾಳಜಿಯನ್ನ ವಹಿಸುತ್ತಾರೆ. ಇದೀಗ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಯ ದಿನಾಂಕವನ್ನು ಶಿಕ್ಷಣ ಇಲಾಖೆ ಪ್ರಕಟ ಮಾಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ದಿನಾಂಕವನ್ನು ಅಧಿಕೃತವಾಗಿ ತಿಳಿಸಿದ್ದಾರೆ. ಹಾಗೇ ಫಲಿತಾಂಶದ ಸಂಭಾವ್ಯ ದಿನಾಂಕವನ್ನು ಸೂಚಿಸಿದ್ದಾರೆ.

ದ್ವಿತೀಯ ಪಿಯು ಪರೀಕ್ಷೆ ನಡೆಯುವಹದು ಫೆಬ್ರವರಿ 28ರಿಂದ ಮಾರ್ಚ್ 17ರವರೆಗೂ ನಡೆಯಲಿದೆ. ಏಪ್ರಿಲ್ 7ರಂದು ಫಲಿತಾಂಶ ಬರುವ ಸಾಧ್ಯತೆ ಇದೆ. ಹಾಗೇ ಎಸ್ಎಸ್ಎಲ್ಸಿ ಪರೀಕ್ಷೆಯು ಮಾರ್ಚ್ 18ರಿಂದ ಏಪ್ರಿಲ್ 2ರವರೆಗೂ ನಡೆಯಲಿದೆ. ಇದರ ಫಲಿತಾಂಶ ಏಪ್ರಿಲ್ 24ರಂದು ಬರುವ ಸಾಧ್ಯತೆ ಇದೆ.

ದ್ವಿತೀಯ ಪಿಯುಸಿಯಲ್ಲಿ ಈ ಬಾರಿ ಒಟ್ಟು 7,10,363 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದಾರೆ. ಅದರಲ್ಲಿ ಹೊಸಬರು 6.46 ಲಕ್ಷ, ಪುನರಾವರ್ತಿತ ವಿದ್ಯಾರ್ಥಿಗಳು 50 ಸಾವಿರ, ಖಾಸಗಿ ವಿದ್ಯಾರ್ಥಿಗಳು 13 ಸಾವಿರ ಇದ್ದಾರೆ. ಇನ್ನು ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಒಟ್ಟು 9,02,889 ವಿದ್ಯಾರ್ಥಿಗಳು ಬರೆಯಲಿದ್ದಾರೆ. ಅದರಲ್ಲಿ ಹೊಸಬರು 8.13 ಲಕ್ಷ ವಿದ್ಯಾರ್ಥಿಗಳಾದರೆ, ಪುನರಾವರ್ತಿತ ವಿದ್ಯಾರ್ಥಿಗಳು 62 ಸಾವಿರ ಇದ್ದಾರೆ. ಖಾಸಗಿಯಾಗಿ 27 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ (KSRTC) ಮತ್ತು ಬಿಎಂಟಿಸಿ (BMTC) ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ತಮ್ಮ ‘ಪರೀಕ್ಷಾ ಪ್ರವೇಶ ಪತ್ರ’ (Hall Ticket) ತೋರಿಸಿ ಪರೀಕ್ಷಾ ಕೇಂದ್ರಕ್ಕೆ ತೆರಳಲು ಮತ್ತು ಮನೆಗೆ ಮರಳಲು ಉಚಿತವಾಗಿ ಪ್ರಯಾಣಿಸಬಹುದು. ಪ್ರಶ್ನೆ ಪತ್ರಿಕೆ ಸೋರಿಕೆ ವದಂತಿ ಹಬ್ಬಿಸುವವರ ವಿರುದ್ಧ ಇಲಾಖೆ ಸಮರ ಸಾರಿದೆ. ವಾಟ್ಸಾಪ್, ಟೆಲಿಗ್ರಾಮ್, ಇನ್ಸ್ಟಾಗ್ರಾಮ್‌ಗಳಲ್ಲಿ “ಪ್ರಶ್ನೆ ಪತ್ರಿಕೆ ಸಿಗುತ್ತದೆ” ಎಂದು ಸುಳ್ಳು ಪೋಸ್ಟ್ ಹಾಕುವ ಅಕೌಂಟ್ಗಳ ಮೇಲೆ ವಿಶೇಷ ನಿಗಾ ಇಡಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now