ಬೆಂಗಳೂರು: ಇಂದು ಎಸ್ಎಸ್ಎಲ್ಸಿ ಮಕ್ಕಳ ಫಲಿತಾಂಶ ಹೊರಬಿದ್ದಿದೆ. ಇಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶದ ಮಾಹಿತಿ ನೀಡಿದ್ದಾರೆ. ಪರೀಕ್ಷೆ ಬರೆದ ಮಕ್ಕಳಲ್ಲಿ 125 ಮಕ್ಕಳು ಔಟ್ ಆಫ್ ಔಟ್ ಮಾರ್ಕ್ಸ್ ತೆಗೆದಿದ್ದಾರೆ.
ಈ ಬಾರಿ ರಾಜ್ಯದಲ್ಲಿ ಒಟ್ಟು 8,20,900 ಮಕ್ಕಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 8,7,206 ಮಕ್ಕಳು ಅದರಲ್ಲಿ ಪರೀಕ್ಷೆ ಬರೆದಿದ್ದರು. ಪರೀಕ್ಷೆ ಬರೆದ 8,53,436 ವಿದ್ಯಾರ್ಥಿಗಳಲ್ಲಿ ಶೇ 85.63 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 90.29ರಷ್ಟು ಬಾಲಕಿಯರು ತೇರ್ಗಡೆಯಾಗಿದ್ದಾರೆ. 81.30 ರಷ್ಟು ಬಾಲಕರು ಉತ್ತೀರ್ಣರಾಗಿದ್ದಾರೆ. ಮರು ಪರೀಕ್ಷೆ ಜೂನ್ 27 ರಂದು ನಡೆಯಲಿದೆ ಎಂದು ಸಚಿವ ನಾಗೇಶ್ ತಿಳಿಸಿದ್ದಾರೆ.