SSLC ಫಲಿತಾಂಶ ಈ ದಿನದಂದು ಪ್ರಕಟ ಸಾಧ್ಯತೆ…!

suddionenews
1 Min Read

ಬೆಂಗಳೂರು; ಎಸ್ಎಸ್ಎಲ್ಸಿ ಬರೆದ ಮಕ್ಕಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಮೇ 3ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಣೆಯಾಗುವ ನಿರೀಕ್ಷೆ ಇದೆ. ಅಧಿಕೃತ ವೆಬ್‌ಸೈಟ್‌ನಲ್ಲಿ ಮಾಹಿತಿ ಲಭ್ಯವಾಗಬಹುದು. ಮೂಲಗಳ ಪ್ರಕಾರ ಮೇ3 ರಂದು ಫಲಿತಾಂಶ ಬರಲಿದೆ ಎನ್ನಲಾಗುತ್ತಿದೆ. ಆದರೆ ಕರ್ನಾಟಕ ಶಾಲಾ ಪರೀಕ್ಷಾ ಮೌಲ್ಯ ಮಾಪನ ಮಂಡಳಿ ಅಧಿಕೃತವಾಗಿ ಘೋಷಣೆ ಮಾಡಿಲ್ಲ.

ಈ ಬಾರಿ ಎಂಟು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಯನ್ನ ಬರೆದಿದ್ದರು. ಹೀಗಾಗಿ ಆ ಎಲ್ಲಾ ವಿದ್ಯಾರ್ಥಿಗಳು ಈಗ ಫಲಿತಾಂಶಕ್ಕಾಗಿ ಕಾಯ್ತಾ ಇದ್ದಾರೆ. ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆದಿದ್ದವು. ಈಗಾಗಲೇ ಮೌಲ್ಯ ಮಾಪನ ಕೂಡ ಮುಕ್ತಾಯವಾಗಿದೆ. ಹೀಗಾಗಿ ಮೇ3 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.

ಅಧಿಕೃತ ವೆಬ್ ಸೈಟ್ https://karresults.nic.in/ ಮತ್ತು kseab.Karnataka.gov.in ವೆಬ್ಸೈಟ್ ಗೆ ಭೇಟಿ ನೀಡಬಹುದು. ಇಲ್ಲಿ ಫಲಿತಾಂಶವನ್ನು ನೀಡಲಾಗಿರುತ್ತದೆ. ಮುಖಪುಟದಲ್ಲಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ, ನಿಮ್ಮ ನೋಂದಣಿ ನಂಬರ್ ಅನ್ನು ನಮೂದಿಸಿ. ವಿದ್ಯಾರ್ಥಿಗಳು ಅದರಲ್ಲಿಯೇ ತಮ್ಮ ಫಲಿತಾಂಶವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.

ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆ 2818 ಪರೀಕ್ಷಾ ಕೇಂದ್ರದಲ್ಲಿ ನಡೆದಿದ್ದವು.‌ಪರೀಕ್ಷೆಗೆ 8 ಲಕ್ಷದ 96 ಸಾವಿರ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಕೂಡ ಜಾರಿ ಮಾಡಲಾಗಿತ್ತು. ವೆಬ್ ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಿ, ಸಿಸಿಟಿವಿ ಕಣ್ಗಾವಲಿನಲ್ಲಿ ಪರೀಕ್ಷೆಯನ್ನು ನಡೆಸಲಾಗಿತ್ತು. ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ಗಳು ಕೂಡ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಹೋದಂತ ಮಕ್ಕಳಿಗೆ ಉಚಿತ ಸರ್ವೀಸ್ ಅನ್ನು ನೀಡಿದ್ದವು‌.

Share This Article
Leave a Comment

Leave a Reply

Your email address will not be published. Required fields are marked *