Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್‌ಎಸ್‌ಎಲ್‌ಸಿ ಫಲಿತಾಂಶದ ಒತ್ತಡ: ಚಿತ್ರದುರ್ಗದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

---Advertisement---

ಚಿತ್ರದುರ್ಗ: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾದ ದಿನವೇ 16 ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ದುರ್ಘಟನೆ ನಡೆದಿದೆ. ಅಯಾನ್ ಬೇಗ್ ಎಂಬ ವಿದ್ಯಾರ್ಥಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆಯ ಮುನ್ನ ತಂಗಿಯನ್ನು ಮನೆಯಿಂದ ಹೊರಗೆ ಕಳುಹಿಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಚಿತ್ರದುರ್ಗದ ಹೊರಪೇಟೆ ನಿವಾಸಿಯಾಗಿದ್ದ ಅಯಾನ್, ಕೆಲವು ದಿನಗಳ ಹಿಂದೆಯೇ ಸಾಮಾಜಿಕ ಜಾಲತಾಣವಾದ Instagram ನಲ್ಲಿ ಆತಂಕ ಹುಟ್ಟಿಸುವ ರೀತಿಯ ಸ್ಟೇಟಸ್ ಹಾಕಿದ್ದನು. “The pose I will be hitting at my result day” ಎಂಬ ಸಂದೇಶ ಗಮನ ಸೆಳೆದಿದೆ.

ಮೃತದೇಹವನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಹೃದಯ ಕಲುಕುವಂತಿದೆ. ಪ್ರಾಥಮಿಕ ಮಾಹಿತಿಯಂತೆ, ವಿದ್ಯಾರ್ಥಿಗೆ ಸುಮಾರು 70% ಅಂಕಗಳು ಬಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ನಿಖರ ಕಾರಣಗಳ ಬಗ್ಗೆ ಕುಟುಂಬಸ್ಥರು ಅಥವಾ ಪೊಲೀಸರು ಇನ್ನೂ ಸ್ಪಷ್ಟಪಡಿಸಿಲ್ಲ.
ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಫಲಿತಾಂಶದ ಒತ್ತಡ, ವೈಯಕ್ತಿಕ ಸಮಸ್ಯೆಗಳು ಅಥವಾ ಇತರೆ ಕಾರಣಗಳು ಈ ಘಟನೆಗೆ ಕಾರಣವಾಗಿದೆಯೇ ಎಂಬುದರ ಬಗ್ಗೆ ಪರಿಶೀಲನೆ ನಡೆಯುತ್ತಿದೆ.

ತಜ್ಞರ ಅಭಿಪ್ರಾಯದಂತೆ, ಪರೀಕ್ಷಾ ಫಲಿತಾಂಶದ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಮಾನಸಿಕ ಬೆಂಬಲ ಮತ್ತು ಮಾರ್ಗದರ್ಶನ ಅತ್ಯಂತ ಅಗತ್ಯ. ಪೋಷಕರು ಮತ್ತು ಶಿಕ್ಷಕರು ಮಕ್ಕಳೊಂದಿಗೆ ನಿರಂತರವಾಗಿ ಮಾತನಾಡಿ, ಒತ್ತಡವನ್ನು ಕಡಿಮೆ ಮಾಡುವತ್ತ ಗಮನ ಹರಿಸಬೇಕು ಎಂಬ ಸಲಹೆ ನೀಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...