ಸುದ್ದಿಒನ್, ಚಿತ್ರದುರ್ಗ, ಮೇ. 09 : ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ, ವಿದ್ಯಾರ್ಥಿಗಳು 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡ 100 ರಷ್ಟು ಫಲಿತಾಂಶ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 151 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, ಇದರಲ್ಲಿ 80 ವಿದ್ಯಾರ್ಥಿಗಳು ಶೇ.85ಕ್ಕಿಂತ ಹೆಚ್ಚು ಅಂಕ, 68 ವಿದ್ಯಾರ್ಥಿಗಳು ಶೇ.60 ಕ್ಕಿಂತ ಹೆಚ್ಚು ಅಂಕ ಹಾಗೂ 03 ವಿದ್ಯಾರ್ಥಿಗಳು ಶೇ.50ಕ್ಕಿಂತ ಹೆಚ್ಚು ಅಂಕ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ.
625 ಕ್ಕೆ 620 ಅಂಕ ಗಳಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿ ಕೀರ್ತಿ ತಂದ ಅಭಯ್ ಸಿ ಐ ವಿದ್ಯಾರ್ಥಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿರುತ್ತಾರೆ.
100ಕ್ಕೆ 100 ಅಂಕಗಳನ್ನು ಪಡೆದ ವಿದ್ಯಾರ್ಥಿಗಳ ವಿವರ.
ಕನ್ನಡ – (125/125) – 07
ಇಂಗ್ಲೀಷ್ – (100/100) – 03
ಹಿಂದಿ – (100/100) – 16
ಗಣಿತ – (100/100) – 2
ವಿಜ್ಞಾನ – (100/100) – 1
ಸಮಾಜ ವಿಜ್ಞಾನ – (100/100) – 6
ಅತ್ಯುತ್ತಮ ಸಾಧನೆಗೈದ ಎಲ್ಲಾ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದವರು ಶ್ಲಾಘಿಸಿ ತುಂಬು ಹೃದಯದಿಂದ ಅಭಿನಂದಿಸಿರುತ್ತಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.













