Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಫಸ್ಟ್ ಕಲಬುರಗಿ ಲಾಸ್ಟ್

---Advertisement---

ಬೆಂಗಳೂರು: ಇಂದು ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ ಕಲಬುರಗಿ ಕೊನೆಯ ಸ್ಥಾನ ಪಡೆದುಕೊಂಡಿದೆ. 7,70,209 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದರು. ಅದರಲ್ಲಿ 7,24,794 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯೂ ಶೇಕಡ 98.40 ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ರೆ ಶೇಕಡ 98.18 ಫಲಿತಾಂಸದ ಪಡೆದ ಉಡುಪಿ ದ್ವಿತೀಯ ಸ್ಥಾನದಲ್ಲಿದೆ. ಶೇಕಡ 85.06 ಫಲಿತಾಂಶದೊಂದಿಗೆ ಕಲಬುರಗಿ ಜಿಲ್ಲೆ ಕಡೆಯ ಸ್ಥಾನಕ್ಕೆ‌ತೃಪ್ತಿ ಪಟ್ಟುಕೊಂಡಿದೆ.

ಈ ಬಾರಿಯ ಫಲಿತಾಂಶದಲ್ಲಿ ಏಳು ವಿದ್ಯಾರ್ಥಿಗಳು ಔಟ್ ಆಫ್ ಔಟ್ ಅಂಕಗಳನ್ನ ಪಡೆದುಕೊಂಡಿದ್ದಾರೆ. ದಾವಣಗೆರೆಯ ಭರತ್, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಶ್, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ, ರಾಯಚೂರಿನ ಸುಖದೇವ್ ವಿದ್ಯಾರ್ಥಿಗಳು 625 ಅಂಕಕ್ಕೆ 625 ಅಂಕವನ್ನು ಪಡೆದುಕೊಂಡು ಶಾಕೆ ಹಾಗೂ ಕುಟುಂಬದ ಕೀರ್ತಿಯನ್ನ ಹೆಚ್ಚಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...