Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಎಸ್‍ಎಸ್‍ಎಲ್‍ಸಿ: ಶೇ.100ರಷ್ಟು ಫಲಿತಾಂಶಕ್ಕೆ ಶ್ರಮಿಸಿ : ಡಯಟ್ ಪ್ರಾಂಶುಪಾಲ ಎಂ.ನಾಸಿರುದ್ದೀನ್

---Advertisement---

ಚಿತ್ರದುರ್ಗ. ಡಿ.15: ಕಲಿಕೆಯಲ್ಲಿ ಹಿಂದುಳಿದ, ನಿಧಾನ ಕಲಿಕಾ ಮಕ್ಕಳಿಗೆ ಶಿಕ್ಷಕರು ಹೆಚ್ಚಿನ ಗಮನ ಹರಿಸುವ ಮೂಲಕ ಎಸ್‍ಎಸ್‍ಎಲ್‍ಸಿ ಫಲಿತಾಂಶ ಶೇ.100ರಷ್ಟು ತಲುಪಲು ಪ್ರಯತ್ನಿಸಬೇಕು ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲ ಎಂ.ನಾಸಿರುದ್ದೀನ್ ಹೇಳಿದರು.

ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಸೋಮವಾರ ಜಿಲ್ಲಾಮಟ್ಟದ ಸಮಾಜ ವಿಜ್ಞಾನ ವಿಷಯ ಶಿಕ್ಷಕರ ಮರುಸಿಂಚನ, ಜ್ಞಾನಸೇತು, ಮೌಲ್ಯಶಿಕ್ಷಣ ಮತ್ತು ಪೋಕ್ಸೋ ಕಾಯಿದೆಗಳ ಆರು ದಿನಗಳ ತರಬೇತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಸ್‍ಎಸ್‍ಎಲ್‍ಸಿ ಪರೀಕ್ಷಾ ನಿಯಮಾವಳಿ ಬದಲಾವಣೆಯಿಂದ ಈಗಾಗಲೇ ನೀಲನಕ್ಷೆ ಹಾಗೂ ನಾಲ್ಕು ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆಯಿಂದ ಮಕ್ಕಳ ಉತ್ತೀರ್ಣಕ್ಕೆ ಸಹಾಯಕವಾಗಬಹುದು ಎಂದು ಅಭಿಪ್ರಾಯಪಟ್ಟರು.
ಜಿಲ್ಲೆಯ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಒಂದು ತಿಂಗಳಿಂದ ಸುಮಾರು 580ಕ್ಕೂ ಹೆಚ್ಚು ಮರು ಸಿಂಚನ, ಜ್ಞಾನಸೇತು, ಪೋಕ್ಸೋ, ಮೌಲ್ಯಶಿಕ್ಷಣ, ವೃತ್ತಿ ಮಾರ್ಗದರ್ಶನ, ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ತರಬೇತಿ ನೀಡಲಾಗಿದೆ ಎಂದು ಹೇಳಿದರು.

ಮಕ್ಕಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ವೃತ್ತಿ ಮಾರ್ಗದರ್ಶನ ಅಗತ್ಯ ಹಾಗೂ ಉತ್ತಮ ಭವಿಷ್ಯ  ರೂಪಿಸಲು ಮೌಲ್ಯಶಿಕ್ಷಣ ಅಗತ್ಯವಾಗಿದ್ದು, ಪ್ರಸ್ತುತ ವೃದ್ಧಾಶ್ರಮಗಳು ಹೆಚ್ಚಾಗುತ್ತಿರುವುದರಿಂದ ಸಮಾಜದಲ್ಲಿ ಕಳವಳಕಾರಿ ಸಂಗತಿ ಎಂದು ವಿಷಾಧಿಸಿದರು.

ಶಾಲಾ  ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ಮಾತನಾಡಿ, ಬರದನಾಡು ಚಿತ್ರದುರ್ಗ ಶಿಕ್ಷಣ ಕ್ಷೇತ್ರದಲ್ಲಿ ಮುಂದುವರೆಯುತ್ತಿದ್ದು, ಎಲ್ಲ ವಿಷಯ ಶಿಕ್ಷಕರು ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಿ ಪರೀಕ್ಷಾ ಭಯ ಹೋಗಲಾಡಿಸಿ, ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ತರಲು ಶ್ರಮಿಸಬೇಕು ಎಂದು ಹೇಳಿದರು.

ತರಬೇತಿಯ ನೋಡಲ್ ಅಧಿಕಾರಿ ಜ್ಞಾನೇಶ್ವರಿ ಪ್ರಾಸ್ತಾವಿಕವಾಗಿ ಮಾತನಾಡಿ, ತರಬೇತಿಯು ಫಲಿತಾಂಶ ಸುಧಾರಣೆ ಸಹಾಯವಾಗಬೇಕು ಎಂದು ತರಬೇತಿಯ ರೂಪುರೇಷೆಗಳನ್ನು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಮಾಜ ವಿಜ್ಞಾನ ವಿಷಯದ ನಿಧಾನ ಕಲಿಕಾ ಮಕ್ಕಳಿಗೆ ಸಿದ್ದಪಡಿಸಿದ ಮಿಷನ್ 40+ ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಸಮಾಜ ವಿಜ್ಞಾನ ವಿಷಯ ಪರಿವೀಕ್ಷಕರಾದ ಕೆ.ಜೆ.ಪ್ರಶಾಂತ, ನಿತ್ಯಾನಂದ, ಡಯಟ್ ಉಪನ್ಯಾಸಕರಾದ  ಎಸ್.ರವಿಬಸವರಾಜ್, ರೇವಣ್ಣ, ರಾಮಚಂದ್ರಪ್ಪ ಸೇರಿದಂತೆ ಜಿಲ್ಲೆಯ ಎಲ್ಲಾ ಸಮಾಜ ವಿಜ್ಞಾನ ಶಿಕ್ಷಕರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...