ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು: ರಾಜಕೀಯ ಅಂದ್ರೇನೆ ಹಾಗೇ. ತಾವಿರುವ ಪಕ್ಷವನ್ನು ಹೊಗಳಿಕೊಂಡು, ವಿರೋಧ ಪಕ್ಷದವರ ಬಗ್ಗೆ ಯಾವಾಗಲೂ ನಿಂದಿಸುವುದು. ಸದ್ಯಕ್ಕೆ ರಾಜಕೀಯ ಎಂದರೆ ಹೆಚ್ಚು ಗಮನಕ್ಕೆ ಬರುವುದು ಇದೆ. ಆದರೆ ಹೀಗೆ ಆರೋಪ ಮಾಡುವಾಗಲೇ ಕೆಲವೊಬ್ಬರಿಂದ ಯಡವಟ್ಟುಗಳಾಗಿ ಬಿಡುತ್ತವೆ. ಈಗ ಸಚುವ ಎಸ್ ಟಿ ಸೋಮಶೇಖರ್ ಕಡೆಯಿಂದಾನೂ ಅದೇ ಆಗಿರುವುದು.
ಬಿಜೆಪಿ ಪರ ಪ್ರಚಾರದಲ್ಲಿ ತೊಡಗಿದ್ದಾಗಲೇ ಇಂಥದ್ದೊಂದು ಘಟನೆ ಜರುಗಿದೆ. ಜೆಡಿಎಸ್ ಆ ವಿಡಿಯೋ ಹಂಚಿಕೊಂಡಿದೆ. ಜೊತೆಗೆ ಎಸ್ ಟಿ ಸೋಮಶೇಖರ್ ಬಗ್ಗೆ ಮಾತನಾಡಿರುವ ಜೆಡಿಎಸ್, ಪಕ್ಷವನ್ನು ಕೆಟ್ಟದಾಗಿ ಬಿಂಬಿಸಿದ್ದಾರೆ. ಪಕ್ಷದ ಬೆನ್ನಿಗೆ ಚೂರಿ ಹಾಕಿ ಹೋದವರು ನೀವೂ. ಸಿದ್ದರಾಮಯ್ಯ, ಡಿಕೆಎಸ್ ವಿರುದ್ಧ ಬೆಂಗಳೂರು ಕೊಳ್ಳೆ ಹೊಡೆದವರು ಎಂದು ಆರೋಪಿಸುತ್ತೀರಿ. ಅಮೂಲ್ ಮತ್ತು ನಂದಿನಿ ವಿಲೀನದ ಬಗ್ಗೆ ಮಾತನಾಡಿದ್ದಕ್ಕೆ ನಮ್ಮನ್ನು ಕಳ್ ನನ್ನಮ್ಮಕ್ಕಳು ಎನ್ನುತ್ತೀರಿ.
ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು. ಚುನಾವಣಾ ಆಯೋಗವೂ ಕ್ರಮ ತೆಗೆದುಕೊಳ್ಳಲಿದೆ. ಸೋಮಶೇಖರ್ ಪಕ್ಷದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ತಾವೂ ಮತದಾರರಿಗೆ ಹಣ ಹಂಚಿಕೆ ಮಾಡಿರುವ ಬಗ್ಗೆ ಮಾತನಾಡಿದ್ದಾರೆ. ಬಿರಿಯಾನಿ ಬಗ್ಗೆಯೂ ಮಾತನಾಡಿದ್ದಾರೆ. ಅಷ್ಟೇ ಅಲ್ಲ ಜೆಡಿಎಸ್, ಕಾಂಗ್ರೆಸ್ ನವರನ್ನು ಜೈಲಿಗೆ ಕಳುಹಿಸುವ ಬಗ್ಗೆಯೂ ಮಾತನಾಡಿದ್ದಾರೆ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್