ಚಿತ್ರದುರ್ಗ,(ಅಕ್ಟೋಬರ್. 06) : ಸಿಬ್ಬಂದಿ ನೇಮಕಾತಿ ಆಯೋಗದಿಂದ ಸಂಯೋಜಿತ ಪದವಿ ಮಟ್ಟದ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 8 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ ಉತ್ತೀರ್ಣರಾಗಿರಬೇಕು, ಅಭ್ಯರ್ಥಿಗಳು 18 ರಿಂದ 32 ವರ್ಷದೊಳಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ ವೆಬ್ಸೈಟ್ www.ssckkr.kar.nic.in/ https://ssc.nic.in
ವೆಬ್ಸೈಟ್ಗೆ ಭೇಟಿ ನೀಡಬಹುದು ಹಾಗೂ ದೂರವಾಣಿ ಸಂಖ್ಯೆ 080-25502520, 9483862020, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ದೂರವಾಣಿ ಸಂಖ್ಯೆ 7022459064, 9945587060ಗೆ ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.