Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಬ್ಬಂದಿ ನೇಮಕಾತಿ ಆಯೋಗ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

---Advertisement---

 

ಚಿತ್ರದುರ್ಗ.ಮೇ.01: ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಮೇ.4 ಅರ್ಜಿ ಸಲ್ಲಿಸಲು ಕೊನೆಯ ದಿನ.
ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್, ಪಿಯುಸಿ, ಮಾನ್ಯತೆ ಪಡೆದ ವಿಶ್ವ ವಿದ್ಯಾಲಯಗಳಿಂದ ಪದವಿ ಉತ್ತೀರ್ಣರಾಗಿರಬೇಕು.

ಅಭ್ಯರ್ಥಿಗಳ ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು. ಎಸ್.ಸಿ/ಎಸ್.ಟಿ/ಒ.ಬಿ.ಸಿ/ಇ.ಎಸ್.ಎಮ್ ಇತರ ನಿರ್ದಿಷ್ಟ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಪರೀಕ್ಷೆಯ ಸಂಭವನೀಯ ದಿನಾಂಕ ಜೂನ್-2026 ಆಗಿದ್ದು, ನಿಖರ ದಿನಾಂಕವನ್ನು ಎಸ್‌ಎಸ್‌ಸಿ ವೆಬ್‌ಸೈಟ್ ಮೂಲಕ ತಿಳಿಸಲಾಗುವುದು.

 

ಹೆಚ್ಚಿನ ಮಾಹಿತಿಗಾಗಿ ಎಸ್‌ಎಸ್‌ಸಿ ವೆಬ್‌ಸೈಟ್  www.ssckkr.kar.nic.in/https://ssc.nic.in     ಗೆ ಭೇಟಿ ನೀಡಬಹುದು ಹಾಗೂ ಸಿಬ್ಬಂದಿ ನೇಮಕಾತಿ ಆಯೋಗದ ದೂರವಾಣಿ ಸಂಖ್ಯೆ 080-25502520 ಅಥವಾ ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂರವಾಣಿ ಸಂಖ್ಯೆ 9945587060, 7022459064 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...