ಸುದ್ದಿಒನ್
ಮಹಾಕುಂಭ ಮೇಳದಲ್ಲಿ ಮೌನಿ ಅಮವಾಸ್ಯೆಯ ದಿನ ನಡೆದ ಕಾಲ್ತುಳಿತದ ಬಗ್ಗೆ ಪ್ರತಿಪಕ್ಷಗಳು ಸಂಸತ್ತಿನಲ್ಲಿ ಧ್ವನಿ ಎತ್ತಿವೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಯುಪಿ ಸಿಎಂ ಯೋಗಿ ಅವರೇ ಹೊಣೆಯಾಗಿದ್ದು, ಅವರು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿವೆ. ಕಾಲ್ತುಳಿತದಲ್ಲಿ ಮೃತಪಟ್ಟವರ ಹೆಸರನ್ನು ಬಹಿರಂಗಪಡಿಸುವಂತೆ ಒತ್ತಾಯಿಸಿವೆ. ಆದರೆ ಸ್ಪೀಕರ್ ಓಂ ಬಿರ್ಲಾ ಕಾಂಗ್ರೆಸ್ ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜನರು ನಿಮ್ಮನ್ನು ಪ್ರಶ್ನೆ ಕೇಳಲು ಕಳುಹಿಸಿದ್ದಾರೆಯೇ ಹೊರತು ಟೇಬಲ್ ಒಡೆಯಲು ಅಲ್ಲ ಎಂದು ಸ್ಪೀಕರ್ ಹೇಳಿದ್ದಕ್ಕಾಗಿ ವಿರೋಧ ಪಕ್ಷಗಳು ರಾಜ್ಯಸಭೆಯಿಂದ ಹೊರನಡೆದವು.
ಜನವರಿ 29 ರಂದು ಮಹಾಕುಂಭ ನಡೆಯುವ ಪ್ರಯಾಗ್‌ರಾಜ್‌ನ ಸೆಕ್ಟರ್ 2 ರ ಬಳಿ ರಾತ್ರಿ 2 ಗಂಟೆ ಸುಮಾರಿಗೆ ಕಾಲ್ತುಳಿತ ಸಂಭವಿಸಿದೆ. ಭಕ್ತರು ಅಮೃತ ಸ್ನಾನಕ್ಕೆ ಮುಗಿಬಿದ್ದಿದ್ದರಿಂದ ಜನಸಂದಣಿ ನಿಯಂತ್ರಿಸಲು ಹಾಕಲಾಗಿದ್ದ ಬ್ಯಾರಿಕೇಡ್‌ಗಳು ಮುರಿದು ಬಿದ್ದಿವೆ. ಬ್ಯಾರಿಕೇಡ್ ಮುರಿದು ಬಿದ್ದಾಗ ಜನರು ಪಕ್ಕದಲ್ಲಿ ಮಲಗಿದ್ದವರ ಮೇಲೆ ಬಿದ್ದಿದ್ದಾರೆ. ಒಬ್ಬರ ಮೇಲೊಬ್ಬರು ಬಿದ್ದಿದ್ದರಿಂದ ಕತ್ತಲಲ್ಲಿ ನೂಕುನುಗ್ಗಲು ಉಂಟಾಯಿತು. ಆ ಗೊಂದಲದಲ್ಲಿ ಕೆಳಗೆ ಬಿದ್ದವರನ್ನು ತುಳಿದು ಹಾಕಿದರು. ಪರಿಸ್ಥಿತಿ ಹತೋಟಿಗೆ ಬರುವಷ್ಟರಲ್ಲಿ 30 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ತ್ರಿವೇಣಿ ಸಂಗಮದಿಂದ ಒಂದು ಕಿಲೋಮೀಟರ್ ದೂರದಲ್ಲಿ ಈ ಘಟನೆ ನಡೆದಿದೆ.
ಪ್ರಯಾಗ್‌ರಾಜ್‌ನಲ್ಲಿ ನಡೆದ ಕಾಲ್ತುಳಿತದಿಂದಾಗಿ ಪ್ರತಿಪಕ್ಷಗಳು ಯುಪಿ ಸರ್ಕಾರವನ್ನು ಟೀಕಿಸುತ್ತಿವೆ. ಸರಿಯಾದ ವ್ಯವಸ್ಥೆ ಮತ್ತು ನಿರ್ವಹಣೆಯ ಕೊರತೆಯಿಂದ ಕಾಲ್ತುಳಿತ ಸಂಭವಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಮಹಾಕುಂಭ ಮೇಳದಲ್ಲಿ ಸಾಮಾನ್ಯ ಭಕ್ತರಿಗಿಂತ ವಿಐಪಿಗಳಿಗೆ ಆದ್ಯತೆ ನೀಡಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ರಾಹುಲ್ ಹೇಳಿದ್ದಾರೆ. ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಕುಂಭಮೇಳದ ವ್ಯವಸ್ಥೆಯನ್ನು ಸೇನೆಗೆ ಹಸ್ತಾಂತರಿಸಲು ಬಯಸಿದ್ದಾರೆ. ಯೋಗಿ ಸರ್ಕಾರ ವಿಶ್ವದರ್ಜೆಯ ಸೌಲಭ್ಯಗಳನ್ನು ಕಲ್ಪಿಸಿದೆ ಎಂದು ಪ್ರಚಾರ ಮಾಡಿದೆ ಎಂದರು. ಕಾಲ್ತುಳಿತ ಘಟನೆಗೆ ನೈತಿಕ ಹೊಣೆ ಹೊತ್ತು ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡಬೇಕು ಎಂದು ಅಖಿಲೇಶ್ ಆಗ್ರಹಿಸಿದ್ದಾರೆ.
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಫೆ. 03…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಫೆ. 03…
ಚಿತ್ರದುರ್ಗ, ಸುದ್ದಿಒನ್, ಫೆ.3: ಚಿತ್ರದುರ್ಗ ಜಿಲ್ಲೆಯಲ್ಲಿ ಕಣ್ಣನ್ ಎಂದೇ ಚಿರಪಚಿತರಾಗಿರುವ ಕೆ.ಎಂ.ಮುತ್ತುಸ್ವಾಮಿ ಜನ್ಮದಿನವನ್ನು ದಿಢೀರ್ ಆಗಿ ಆಚರಿಸಿ ಸಂಭ್ರಮಿಸಿದರು. ಜಿಲ್ಲಾ…
ಗದಗ: ಕಳೆದ ಕೆಲವು ದಿನಗಳಿಂದಾನೂ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ನಡುವೆ ಎಲ್ಲವೂ ಸರಿ ಇಲ್ಲ. ಒಬ್ಬರಿಗೊಬ್ಬರು ಮಾತಿನ…
ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 03 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ, ತೊಗರಿ ಸೇರಿದಂತೆ ಇತರೆ ಉತ್ಪನ್ನಗಳ…
ಶಿವಮೊಗ್ಗ: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ. ಬಿವೈ ವಿಜಯೇಂದ್ರ ಅವರನ್ನು ದ್ವೇಷಿಸುವ, ಆ ಸ್ಥಾನದಿಂದ ಕೆಳಗಿಳಿಸಬೇಕೆಂದು ಯತ್ನಾಳ್…