Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ಬಜೆಟ್ | ಹುಟ್ಟುವ ಮಕ್ಕಳ ಮೇಲೂ ಸಾಲ ಹೊರೆ : ಶ್ರೀರಾಮುಲು ಟೀಕೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಮಾ. 08 :
ಸಿದ್ಧರಾಮಯ್ಯರಿಂದ ಸಾಲದ ಮೂಟೆಯ ಬಜೆಟ್ ಮಂಡನೆ ಆಗಿದೆ, ಹುಟ್ಟುವ ಮಕ್ಕಳ ಮೇಲೂ ಸಾಲ ಹೊರಿಸುವ ಕೆಲಸ ಆಗಿದೆ ಎಂದು ಮಾಜಿ ಸಚಿವರಾದ ಶ್ರೀರಾಮುಲು ಟೀಕಿಸಿದ್ದಾರೆ.

ಚಿತ್ರದುರ್ಗ ನಗರದ ಶ್ರೀ ವಾಲ್ಮೀಕಿ ಭವನದ ಹತ್ತಿರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದ ಖಜಾನೆ ಖಾಲಿ ಆಗಿದೆ. ಐವತ್ತು ಸಾವಿರ ಹುದ್ದೆ ನೇಮಕಾತಿ ಕೇವಲ ಕುಂಟು ನೆಪವಾಗಿದೆ. ಸಿದ್ಧರಾಮಯ್ಯ ಸಾಲದ ಬಜೆಟ್ ನೋಡಿ ಡಿ.ಕೆ ಶಿವಕುಮಾರ್ ಸಿಎಂ ಆಗಲ್ಲ.ರಾಜ್ಯ ದಿವಾಳಿಯಾದ ವೇಳೆ ಡಿ.ಕೆ ಶಿವಕುಮಾರ್ ಸಿಎಂ ಆಗಿ ಏನು ಮಾಡುತ್ತಾನೆ.. ಡಿಸಿಎಂ ಡಿ.ಕೆ ಶಿವಕುಮಾರ್ ಸಿಎಂ ಸ್ಥಾನದಿಂದ ಹಿಂದೆ ಸರಿಯುತ್ತಾರೆ ಎಂದು ಭವಿಷ್ಯ ನುಡಿದರು.

ಬಸವರಾಜ ಬೊಮ್ಮಾಯಿರವರ ಆಡಳಿತದಲ್ಲಿ ಎಸ್. ಸಿ/ಎಸ್. ಟಿ ಮೀಸಲಾತಿ ಹೆಚ್ಚಳ ಮಾಡಿದ್ದರು ಒಟ್ಟು ಶೇ.50% ರಷ್ಟಿದ್ದ ಮೀಸಲಾತಿಯನ್ನು ಶೇ 56%ಕ್ಕೆ ಹೆಚ್ಚಿಸಲಾಯಿತು. ಕಾಂಗ್ರೆಸ್ ಆಡಳಿತದಲ್ಲಿ ಶೇ.50% ಮೀಸಲಾತಿ ನೀಡುವ ಕೆಲಸ ಆಗಿದೆ. ಜನಸಂಖ್ಯೆ ಆಧಾರದ ಮೀಸಲಾತಿ  ಪಡೆಯುವುದು ನಮ್ಮ ಹಕ್ಕು…ನಾಗಮೋಹನದಾಸ್ ವರದಿ ಜಾರಿಗೆ ಕ್ರಮ ಕೈಗೊಂಡಿದ್ದೆವು. ಕಾಂಗ್ರೆಸ್ ಸರ್ಕಾರ ಮೀಸಲಾತಿ ಕಸಿಯುವ ದಲಿತ ವಿರೋಧದ ವಿರುದ್ಧ ಉಗ್ರ ಹೋರಾಟ ಮಾಡುವ ನಿಟ್ಟಿನಲ್ಲಿ ಇಂದು ಸಭೆ ನಡೆಯಲಿದೆ ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...