ಬೆಂಗಳೂರು.ಜುಲೈ.22: ರಾಜ್ಯದಲ್ಲಿ ಸಂಭಾವ್ಯ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ತಡೆಯಲು ರಾಜ್ಯ ಸರ್ಕಾರ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಕುಡಿಯುವ ನೀರಿನ ಅಭಾವ ನಿವಾರಣೆಗಾಗಿ ಪ್ರತಿ ಜಿಲ್ಲೆಗೆ ₹5 ಕೋಟಿ ಹಾಗೂ ಪ್ರತಿ ತಾಲೂಕಿಗೆ ₹1 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆ ಮಾಡಲಾಗುತ್ತಿದೆ ಎಂದು ಡಿಸಿಎಂ ಡಾ. ಜಿ. ಪರಮೇಶ್ವರ್ ಅವರು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುರ್ತು ಸಂದರ್ಭಗಳಲ್ಲಿ ತಕ್ಷಣವೇ ಬಳಕೆಗೆ ಸಿಗುವಂತೆ ಎಲ್ಲಾ ಜಿಲ್ಲಾಧಿಕಾರಿಗಳ ವೈಯಕ್ತಿಕ ಖಾತೆಯಲ್ಲಿ ಒಟ್ಟು ₹329 ಕೋಟಿ ರೂಪಾಯಿಗಳಷ್ಟು ಮೊತ್ತ ಲಭ್ಯವಿದೆ ಎಂದರು. ಈ ಹಣವನ್ನು ಅಗತ್ಯಕ್ಕೆ ತಕ್ಕಂತೆ ನೀರು ಪೂರೈಕೆ ಮತ್ತು ಸಂಬಂಧಿತ ಕಾಮಗಾರಿಗಳಿಗೆ ಬಳಸಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಪೂರ್ಣ ಅಧಿಕಾರ ನೀಡಲಾಗಿದೆ.
ವರದಿಯ ಪ್ರಕಾರ, ಬರದ ವಾತಾವರಣ ಉಂಟಾದಲ್ಲಿ ಗ್ರಾಮೀಣ ಭಾಗದಲ್ಲಿ ಉದ್ಯೋಗದ ಕೊರತೆ ಎದುರಾಗದಂತೆ ಎಬಿ ರಾಮ್ ಜಿ ಯೋಜನೆಯಡಿ ಸ್ಥಳೀಯವಾಗಿಯೇ ಕೆಲಸ ಸೃಷ್ಟಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಇದರಿಂದಾಗಿ ರೈತರು, ಕೃಷಿ ಕಾರ್ಮಿಕರು ಮತ್ತು ಸಾಮಾನ್ಯ ಜನರು ಬದುಕಿನ ಅನಿವಾರ್ಯತೆಗಾಗಿ ಬೇರೆ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಡೆಯಬಹುದು. ಮುಖ್ಯಮಂತ್ರಿಗಳ ಸೂಚನೆಯಂತೆ ರಾಜ್ಯದ ಜನತೆ ಮತ್ತು ಕೃಷಿಕರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಎಲ್ಲಾ ಮುನ್ನೆಚ್ಚರಿಕೆಯ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








