ಚಿತ್ರದುರ್ಗ, (ಅ.11) : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‍ನ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ಸೀಬಾರದ ಸಮೀಪವಿರುವ ರಾಷ್ಟ್ರನಾಯಕ ಎಸ್.ನಿಜಲಿಂಗಪ್ಪನವರ ಸ್ಮಾರಕದ ಸಮೀಪ ಭಾನುವಾರ ನಡೆಯಿತು.

ಪರಿಷತ್‍ನ ರಾಜ್ಯಾಧ್ಯಕ್ಷ ಡಾ.ಹುಲಿಕಲ್ ನಟರಾಜ್‍ರವರ ಅಧ್ಯಕ್ಷತೆಯಲ್ಲಿ ನಡೆಸ ಸಭೆಯಲ್ಲಿ ಅನೇಕ ಐತಿಹಾಸಿಕ ನಿರ್ಣಯಗಳನ್ನು ತೆಗೆದುಕೊಂಡು ಜಿತ್ರದುರ್ಗ ಜಿಲ್ಲಾ ಸಮಿತಿಯನ್ನು ಉದ್ಘಾಟಿಸಲಾಯಿತು.
ಮಾದಾರ ಚನ್ನಯ್ಯ ಗುರುಪೀಠದ ಮಾದಾರ ಚನ್ನಯ್ಯಸ್ವಾಮೀಜಿ, ಯಾದಗಿರಿಯ ಗುರುಮಿಠಕಲ್ ಮಠದ ಶಾಂತವೀರ ಮುರುಘಾಶ್ರೀಗಳು ಸಾನಿಧ್ಯ ವಹಿಸಿದ್ದರು.
ಜಿಲ್ಲಾಧ್ಯಕ್ಷರಾದ ನಾಗರಾಜ್ ಸಂಗಂ, ಪ್ರಧಾನ ಕಾರ್ಯದರ್ಶಿ ಲೋಕೇಶ್ ಪಿ, ಜಿಲ್ಲಾ ನೂತನ ಕಾರ್ಯಕಾರಿ ಸಮಿತಿಗೆ ಅಧಿಕಾರ ನೀಡಲಾಯಿತು.
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‍ನ ರಾಜ್ಯ ಉಪಾಧ್ಯಕ್ಷರುಗಳಾದ ಡಿ.ಟಿ.ಅರುಣ್‍ಕುಮಾರ್, ಡಾ.ಪಲ್ಲವಿಮಣಿ, ಶ್ರೀಮತಿ ಮಧುರಾ, ಅಶೋಕ್‍ಕುಮಾರ್, ರೂಪ ಬೆಂಗಳೂರು, ಪ್ರಧಾನ ಕಾರ್ಯದರ್ಶಿ ದಾನಿ ಬಾಬುರಾವ್, ಕಾನೂನು ಸಲಹೆಗಾರರಾದ ಇರ್ಷಾದ್ ಅಹಮದ್, ಹನುಮಂತೆಗೌಡರು, ಮಲ್ಲಿಕಾರ್ಜುನಯ್ಯ, ರಾಜ್ಯದ 20 ಕ್ಕೂ ಹೆಚ್ಚು ಜಿಲ್ಲಾಧ್ಯಕ್ಷರು, ಚಿತ್ರದುರ್ಗ ಜಿಲ್ಲೆಯ ಎಲ್ಲಾ ಪದಾಧಿಕಾರಿಗಳು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದರು.
ರಾಜ್ಯ ಸಂಘಟನಾ ಕಾರ್ಯದರ್ಶಿ ವಿ.ಟಿ.ಸ್ವಾಮಿ ನಿರೂಪಿಸಿದರು.

