Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಅ. 11, 12 ರಂದು ರಾಜ್ಯ ಕಾರ್ಯಕಾರಿಣಿ ಸಭೆ : ಅಖಿಲೇಶ್ ಯಾದವ್ ಭಾಗಿ  

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್‍ಯಾದವ್ ಇದೇ ತಿಂಗಳ 11 ಮತ್ತು 12 ರಂದು ಚಿತ್ರದುರ್ಗದ ಖಾಸಗಿ ಹೋಟೆಲ್‍ನಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಿ ಪಿ.ಡಿ.ಎ. ಬಗ್ಗೆ ಕಾರ್ಯಕರ್ತರಲ್ಲಿ ಅರಿವು ಮೂಡಿಸಲಿದ್ದಾರೆಂದು ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಎಸ್.ಲಕ್ಷ್ಮಿಕಾಂತ್ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸುತ್ತಿರುವುದರ ವಿರುದ್ದ ಜನತೆಯಲ್ಲಿ ಜಾಗೃತಿ ಮೂಡಿಸಿ ಸಮಾಜವಾದಿ ಪಕ್ಷ ಮಾನವೀಯತೆ, ಜಾತ್ಯತೀತತೆ ಸಮಾನತೆ, ಪ್ರಜಾಪ್ರಭುತ್ವದ ಮೇಲೆ ನಿಂತಿದೆ ಎನ್ನುವುದನ್ನು ತಿಳಿಸಲಿಕ್ಕಾಗಿ ರಾಜ್ಯ ಕಾರ್ಯಕಾರಿಣಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

 

ಯಾವುದೇ ಜಾತಿ ತಾರತಮ್ಯವಿಲ್ಲದೆ ಎಲ್ಲರನ್ನು ಸಮಾನವಾಗಿ ಕಾಣುವುದು ಸಮಾಜವಾದಿ ಪಾರ್ಟಿಯ ಉದ್ದೇಶ. ಪಕ್ಷಕ್ಕೆ ಶಕ್ತಿ ತುಂಬಿ ಮುಂಬರುವ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕೆಂಬ ಗುರಿಯಿದೆ. ಅದಕ್ಕಾಗಿ ಅಖಿಲೇಶ್ ಯಾದವ್ ಚಿತ್ರದುರ್ಗಕ್ಕೆ ಆಗಮಿಸಲಿದ್ದಾರೆಂದು ಎಸ್.ಲಕ್ಷ್ಮಿಕಾಂತ್ ನುಡಿದರು.

ಸಮಾಜವಾದಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಎನ್.ಡಿ.ಗುರುಮೂರ್ತಿ, ಮೊಳಕಾಲ್ಮುರು ತಾಲ್ಲೂಕು ಉಪಾಧ್ಯಕ್ಷ ತಿಪ್ಪೇಸ್ವಾಮಿ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now