Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯಾದ್ಯಂತ ಪ್ರತಿ ಪೊಲೀಸ್ ವೃತ್ತದಲ್ಲೂ ‘ವಿಶೇಷ ರೌಡಿ ನಿಗ್ರಹ ಪಡೆ’ ರಚನೆ : ರಾಜ್ಯ ಸರ್ಕಾರ ನಿರ್ಧಾರ

---Advertisement---

ಬೆಂಗಳೂರು.ಜುಲೈ.23: ರಾಜ್ಯದಲ್ಲಿ ರೌಡಿಸಂ ಹಾಗೂ ಸಮಾಜ ವಿರೋಧಿ ಚಟುವಟಿಕೆಗಳನ್ನು ತಡೆದು ಸಾರ್ವಜನಿಕರಿಗೆ ಸುರಕ್ಷಿತ ವಾತಾವರಣ ನಿರ್ಮಿಸಲು ರಾಜ್ಯ ಸರ್ಕಾರ ಅತ್ಯಂತ ಮಹತ್ವದ ಹೆಜ್ಜೆ ಇಟ್ಟಿದೆ. ಸಮಾಜದ ಶಾಂತಿ ಕದಡುವ ದುಷ್ಟ ಶಕ್ತಿಗಳಿಗೆ ಪೂರ್ಣವಿರಾಮ ಇಡಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದೆ.

ಈ ಉದ್ದೇಶಕ್ಕಾಗಿ ರಾಜ್ಯದ ಪ್ರತಿಯೊಂದು ಪೊಲೀಸ್ ವೃತ್ತದಲ್ಲೂ (Police Circle) ಅತ್ಯಂತ ಕಾರ್ಯನಿರತ ‘ವಿಶೇಷ ರೌಡಿ ನಿಗ್ರಹ ಪಡೆ’ಯನ್ನು (Special Anti-Rowdy Squad) ರಚಿಸಲಾಗಿದೆ.

 

ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕೆಡಿಸುವವರ ಹಾಗೂ ಸಾರ್ವಜನಿಕರಿಗೆ ಕಿರುಕುಳ ನೀಡುವವರ ವಿರುದ್ಧ ‘ಶೂನ್ಯ ಸಹಿಷ್ಣುತೆ’ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ.

ಕಾನೂನನ್ನು ಕೈಗೆತ್ತಿಕೊಳ್ಳುವವರು ಎಷ್ಟೇ ಪ್ರಭಾವಿಯಾಗಿದ್ದರೂ ಅವರ ವಿರುದ್ಧ ದಾಕ್ಷಿಣ್ಯವಿಲ್ಲದೆ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಾಡಿನ ಪ್ರತಿಯೊಬ್ಬ ಪ್ರಜೆಯ ಸುರಕ್ಷತೆ, ನೆಮ್ಮದಿ ಮತ್ತು ಶಾಂತಿಯುತ ಜೀವನವೇ ಸರ್ಕಾರದ ಮೊದಲ ಆದ್ಯತೆಯಾಗಿದೆ.

ಈ ನೂತನ ನಿಗ್ರಹ ಪಡೆಯು ರೌಡಿ ಶೀಟರ್ಗಳು, ಅಕ್ರಮ ಚಟುವಟಿಕೆಗಳು ಮತ್ತು ಗೂಂಡಾವರ್ತನೆ ನಡೆಸುವವರ ಮೇಲೆ ಸದಾ ಕಣ್ಣಿಡಲಿದ್ದು, ಅಪರಾಧ ಕೃತ್ಯಗಳಿಗೆ ಸಂಪೂರ್ಣ ಬ್ರೇಕ್ ಹಾಕುವ ವಿಶ್ವಾಸವನ್ನು ವ್ಯಕ್ತಪಡಿಸಲಾಗಿದೆ.

Join WhatsApp

Join Now

Join Telegram

Join Now