Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ಸರ್ಕಾರದಿಂದ ಮತ್ತೆ ಹೊಸದಾಗಿ 40 ತಾಲೂಕುಗಳು ಬರಪೀಡಿತ ಎಂದು ಘೋಷಣೆ

---Advertisement---

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ಬರ ಪರಿಸ್ಥಿತಿ ತೀವ್ರಗೊಂಡಿದ್ದು, ವೈಜ್ಞಾನಿಕ ಮೌಲ್ಯಮಾಪನದ ಬಳಿಕ ರಾಜ್ಯ ಸರ್ಕಾರ ಹೊಸದಾಗಿ 40 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ.

ಇದರೊಂದಿಗೆ ಒಟ್ಟು 239 ತಾಲೂಕುಗಳ ಪೈಕಿ ಬರಪೀಡಿತ ತಾಲೂಕುಗಳ ಸಂಖ್ಯೆ 217ಕ್ಕೆ ತಲುಪಿದ್ದು, ಕೇವಲ 22 ತಾಲೂಕುಗಳನ್ನು ಹೊರತುಪಡಿಸಿ ಇಡೀ ರಾಜ್ಯವೇ ಕ್ಷಾಮದ ಛಾಯೆಗೆ ಒಳಗಾದಂತಾಗಿದೆ. ಪ್ರಸ್ತುತ ಘೋಷಣೆಯಾಗಿರುವ ಒಟ್ಟು ತಾಲೂಕುಗಳಲ್ಲಿ 185 ತಾಲೂಕುಗಳಲ್ಲಿ ತೀವ್ರ ಬರ ಹಾಗೂ 32 ತಾಲೂಕುಗಳಲ್ಲಿ ಸಾಧಾರಣ ಬರ ಪರಿಸ್ಥಿತಿ ಇದೆ ಎಂದು ಸರ್ಕಾರ ತಿಳಿಸಿದೆ.

ಹಂತ ಹಂತವಾಗಿ ನಾಲ್ಕು ಬಾರಿ ಮೌಲ್ಯಮಾಪನ ನಡೆಸಿ ಈ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಮೊದಲಿಗೆ ಆಗಸ್ಟ್ 27ರಂದು 101 ತಾಲೂಕುಗಳು, ನಂತರದ ಹಂತಗಳಲ್ಲಿ ಕ್ರಮವಾಗಿ 23 ಹಾಗೂ 53 ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗಿತ್ತು. ಸೆಪ್ಟೆಂಬರ್ 21 ಮತ್ತು 23ರಂದು ವೈಜ್ಞಾನಿಕ ಮೌಲ್ಯಮಾಪನಕ್ಕೆ ಆದೇಶಿಸಲಾಗಿದ್ದ ಮಲೆನಾಡು ಹಾಗೂ ಕರಾವಳಿ ಭಾಗ ಸೇರಿದಂತೆ ಒಟ್ಟು 40 ತಾಲೂಕುಗಳನ್ನು ಇದೀಗ ನಾಲ್ಕನೇ ಪಟ್ಟಿಯಲ್ಲಿ ಅಧಿಕೃತವಾಗಿ ಸೇರ್ಪಡೆಗೊಳಿಸಲಾಗಿದೆ.

ಹೊಸದಾಗಿ ಸೇರ್ಪಡೆಯಾಗಿರುವ 40 ತಾಲೂಕುಗಳಲ್ಲಿ ಚನ್ನಪಟ್ಟಣ, ಕನಕಪುರ, ಹಾರೋಹಳ್ಳಿ, ಜಗಳೂರು, ಪಿರಿಯಾಪಟ್ಟಣ, ಕುಷ್ಟಗಿ, ಔರಾದ್, ಗೋಕಾಕ್, ರಾಮದುರ್ಗ, ಸವದತ್ತಿ, ಕಾಗವಾಡ, ಇಂಡಿ, ಚಡಚಣ, ತಾಳಿಕೋಟೆ, ಗದಗ, ಮುಂಡರಗಿ, ರೋಣ, ಹಿರೇಕೆರೂರು, ಧಾರವಾಡ, ಕಲಘಟಗಿ, ಕುಂದಗೋಳ, ಆಳ್ನಾವರ, ಭದ್ರಾವತಿ, ಶಿಕಾರಿಪುರ, ಶಿವಮೊಗ್ಗ, ಸೊರಬ, ತೀರ್ಥಹಳ್ಳಿ, ಚಿಕ್ಕಮಗಳೂರು, ಕಳಸ, ಮಡಿಕೇರಿ, ಕುಶಾಲನಗರ, ಬೆಳ್ತಂಗಡಿ, ಬಂಟ್ವಾಳ, ಉಲ್ಲಾಳ, ಉಡುಪಿ, ಬೈಂದೂರು, ಅಂಕೋಲಾ, ಭಟ್ಕಳ, ಹಳಿಯಾಳ ಹಾಗೂ ಶಿರಸಿ ಸೇರಿವೆ.

Join WhatsApp

Join Now

Join Telegram

Join Now