ಚಿತ್ರದುರ್ಗ ಜ. 22 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಸಂಯುಕ್ತಾಶ್ರಯದಲ್ಲಿ ಜ. 27 ರಿಂದ ಏರ್ಪಡಿಸಲು ಉದ್ದೇಶಿಸಿದ್ದ ರಾಜ್ಯ ಸರ್ಕಾರಿ ನೌಕರರ ವಾರ್ಷಿಕ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಮುಂದೂಡಿ, ಜ. 29 ಮತ್ತು 30 ರಂದು ನಗರದ ವೀರ ವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಆನ್‍ಲೈನ್ ನಲ್ಲಿ ನೊಂದಣಿಗೆ ಜ. 24 ಕೊನೆಯ ದಿನವಾಗಿದೆ ಎಂದು ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ ಅವರು ತಿಳಿಸಿದ್ದಾರೆ.

ವಾರ್ಷಿಕ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳು ಮಹಿಳೆಯರಿಗೆ ಮತ್ತು ಪುರುಷರಿಗೆ ವಯೋಮಾನ ಆಧಾರದಲ್ಲಿ ಪ್ರತ್ಯೇಕವಾಗಿ ಆಯೋಜಿಸಲಾಗಿದ್ದು, ವಿವಿಧ ಕ್ರೀಡೆಗಳು, ಈಜು ಸ್ಪರ್ಧೆ, ಸಂಗೀತ ಹಾಗೂ ನೃತ್ಯ ಸ್ಪರ್ಧೆಗಳು ಜರುಗಲಿವೆ.
ರಾಜ್ಯ ಸರ್ಕಾರದ ಎಲ್ಲಾ ಖಾಯಂ ನೌಕರರು ಸ್ಪರ್ಧೆಗಳಲ್ಲಿ ಭಾಗವಹಿಸಲು ಅರ್ಹರಿದ್ದು. ಜ. 24 ರ ಒಳಗಾಗಿ ಆನ್‍ಲೈನ್ ಲಿಂಕ್‍ನಲ್ಲಿ ವಿವರ ಭರ್ತಿ ಮಾಡಿ ನೊಂದಣಿ ಮಾಡಿಕೊಳ್ಳಬೇಕು. ಎಲ್ಲ ಕ್ರೀಡಾಪಟುಗಳು ಇಲಾಖಾ ಮುಖ್ಯಸ್ಥರಿಂದ ನೀಡಲಾದ ಅಧಿಕೃತ ಗುರುತಿನ ಚೀಟಿ ಕಡ್ಡಾಯವಾಗಿ ಸಲ್ಲಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಎಲ್ಲ ಸರ್ಕಾರಿ ನೌಕರರು ಜ. 29 ಮತ್ತು 30 ರಂದು ಎರಡು ದಿನಗಳ ಕಾಲ ಜರುಗುವ ವಾರ್ಷಿಕ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು.
ಹೆಚ್ಚಿನ ಮಾಹಿತಿಗೆ ಸಂತೋಷ್ ಕುಮಾರ್-9964002787, ಜಯರಾಂ-9611956940 ಅಥವಾ ಹನುಮಂತರಾಯಪ್ಪ- 9900437024 ಇವರನ್ನು ಸಂಪರ್ಕಿಸಬಹುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮಾಲತೇಶ ಮುದಜ್ಜಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತ ನೆಲವಗಿ ಅವರು ಮನವಿ ಮಾಡಿದ್ದಾರೆ.












