ಶಿವಮೊಗ್ಗದಿಂದ ರಾಜ್ಯ ಸರ್ಕಾರಿ ನೌಕರರ ಅಧ್ಯಕ್ಷ ಷಡಕ್ಷರಿ ವರ್ಗಾವಣೆ..!

1 Min Read

 

ಶಿವಮೊಗ್ಗ: ಅಧಿಕಾರ ದುರ್ಬಳಕೆ ಆರೋಪ ಕೇಳಿ ಬಂದ ಹಿನ್ನೆಲೆ ರಾಜ್ಯ ಸರ್ಕಾರಿ ನೌಕರರ ಅಧ್ಯಕ್ಷ ಷಡಕ್ಷರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾವಣೆ ಮಾಡಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಆರೋಪ ಕೇಳಿ ಬಂದ ಕೂಡಲೇ ಶಿವಮೊಗ್ಗ ಜಿಲ್ಲಾಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಸಿ.ಎಸ್.ಷಡಕ್ಷರಿಯವರನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದರು. ಅದರಂತೆ ಇದೀಗ .ಷಡಕ್ಷರಿಯವರನ್ನು ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾವಣೆ ಮಾಡಲಾಗಿದೆ.

ಷಡಕ್ಷರಿ ಅವರ ಅಧಿಕಾರ ದುರ್ಬಳಕೆ ಬಗ್ಗೆ ಶಿವಮೊಗ್ಗ ಜಿಲ್ಲಾ ಪಂಚಾಯತ್ ಕಾರ್ಯಪಾಲಕ, ಇಂಜಿನಿಯರ್ ವರದಿ ನೀಡಿದ್ದಾರೆ. ರಾಯಲ್ಟಿ ಪಾವತಿಸದೆ ಶಿವಮೊಗ್ಗದ ಅಬ್ಬಲಗೆರೆಯ ಕೆರೆಯಿಂದ ಮಣ್ಣು ಸಾಗಿಸಿದ್ದಾರೆ. ಈ ಮೂಲಕ ಸರ್ಕಾರದ ಖಜಾನೆಗೆ 71,45,920 ನಷ್ಟ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಕರ್ತವ್ಯ ಸ್ಥಾನದಲ್ಲಿರದೇ ಬೆಂಗಳೂರಿನಲ್ಲಿಯೇ ಹೆಚ್ಚು ಸಮಯ ಇರುತ್ತಾರೆ ಎನ್ನುವ ಆರೋಪ ಕೇಳಿಬಂದಿತ್ತು. ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಹೆಚ್ಚು ಕೆಲಸ ಇಲ್ಲದೇ ಇರುವುದರಿಂದ ಶಿವಮೊಗ್ಗದ ಬದಲು ಬೆಂಗಳೂರಿನಲ್ಲಿಯೇ ಸಮಯ ಕಳೆಯುತ್ತಿದ್ದರು ಎಂದು ಹೇಳಲಾಗಿತ್ತು. ಇದನ್ನೂ ಸಹ ಗಂಭೀರವಾಗಿ ಪರಿಗಣಿಸಿದ ಸರ್ಕಾರ, ಇದೀಗ ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾಯಿಸಿದೆ.

Share This Article
Leave a Comment

Leave a Reply

Your email address will not be published. Required fields are marked *