ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಲಾಂಛನ ಬಿಡುಗಡೆ

suddionenews
1 Min Read

ಸುದ್ದಿಒನ್, ದಾವಣಗೆರೆ, (ಅ.17) : ಜಿಲ್ಲಾ ಕೇಂದ್ರದಲ್ಲಿ ಅಕ್ಟೋಬರ್ 22 ರಿಂದ 24 ರವರೆಗೆ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಲಾಂಛನವನ್ನು ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿಯವರು ಭಾನುವಾರ ಬಿಡುಗಡೆಗೊಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಮಾತನಾಡಿ, ಎರಡು ದಿನಗಳ ಕಾಲ ನಡೆಯಲಿರುವ ಕ್ರೀಡಾಕೂಟವನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಯೋಜಿಸಬೇಕು’ ಎಂದು ಜಿಲ್ಲಾಧ್ಯಕ್ಷರಿಗೆ ಸೂಚಿಸಿದರು.

ಕ್ರೀಡಾಕೂಟದಲ್ಲಿ ಭಾಗವಹಿಸುವ ಸರ್ಕಾರಿ ನೌಕರರಿಗೆ ಊಟೋಪಚಾರ, ವಸತಿ ವ್ಯವಸ್ಥೆ ಹಾಗೂ ಸಂಜೆಯ ಮನೋರಂಜನೆ ಕಾರ್ಯಕ್ರಮಗಳ ಆಯೋಜನೆಗೆ ಸಂಬಂಧಿಸಿದಂತೆ ಪೂರ್ವಸಿದ್ಧತೆಗಳ ಬಗ್ಗೆ ಪರಿಶೀಲಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.

ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಪಾಲಾಕ್ಷಿ, ತುಮಕೂರು ಜಿಲ್ಲಾಧ್ಯಕ್ಷರಾದ ನರಸಿಂಹರಾಜು, ಚಿತ್ರದುರ್ಗದ ಅಧ್ಯಕ್ಷರಾದ ಮಂಜುನಾಥ್,ಕೇಂದ್ರ ಸಂಘದ ಪದಾಧಿಕಾರಿಗಳಾದ ರುದ್ರಪ್ಪ,ಟಿ. ಶ್ರೀನಿವಾಸ್, ವೆಂಕಟೇಶಯ್ಯ,ಸಿದ್ದೇಶ್ವರ, ಡಾ. ನೆಲ್ಕುದ್ರಿ ಸದಾನಂದ, ಸರ್ಕಾರಿ ಮುದ್ರಣ ಇಲಾಖೆಯ ಸದಾನಂದ, ಶಿವಲಿಂಗಯ್ಯ, ಚೇತನ್ ರಾಜ್, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀನಿವಾಸ್, ಜಿಲ್ಲಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *