Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ: ಮೇ 23ರಿಂದ ಬೆಂಗಳೂರಿನಲ್ಲಿ ಚಾಲನೆ – ಭಾಗವಹಿಸುವವರಿಗೆ ಪ್ರಮುಖ ಸೂಚನೆಗಳು

---Advertisement---

ಸುದ್ದಿಒನ್,ಬೆಂಗಳೂರು,ಮೇ.15: ರಾಜ್ಯದ ಸರ್ಕಾರಿ ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ, 2026ನೇ ಸಾಲಿನ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಈ ಕುರಿತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಅಧಿಕೃತ ಸುತ್ತೋಲೆ ಹೊರಡಿಸಿದ್ದಾರೆ.

ಈ ಕ್ರೀಡಾಕೂಟವು ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ದಿನಾಂಕ ಮೇ 23 ರಿಂದ ಮೇ 25, 2026ರವರೆಗೆ (ಒಟ್ಟು ಮೂರು ದಿನಗಳು) ನಡೆಯಲಿದೆ. ರಾಜ್ಯ ಸರ್ಕಾರದ ಎಲ್ಲಾ ಖಾಯಂ ನೌಕರರು ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಅರ್ಹರು.

ದಿನಗೂಲಿ, ತಾತ್ಕಾಲಿಕ, ಗುತ್ತಿಗೆ ನೌಕರರು ಹಾಗೂ ನಿಗಮ/ಮಂಡಳಿಗಳ ನೌಕರರಿಗೆ ಭಾಗವಹಿಸಲು ಅವಕಾಶವಿರುವುದಿಲ್ಲ. ಅಲ್ಲದೆ, ಕ್ರೀಡಾ ಇಲಾಖೆಯ ತರಬೇತುದಾರರು ಮತ್ತು ಕ್ರೀಡಾ ಕೋಟಾದಡಿ ನೇಮಕಗೊಂಡ ನೌಕರರಿಗೂ ನಿರ್ಬಂಧವಿದೆ.ಭಾಗವಹಿಸುವ ಕ್ರೀಡಾಪಟುಗಳು ರಾಜ್ಯ ಸರ್ಕಾರಿ ನೌಕರರ ಸಂಘದಿಂದ ನೀಡಲಾದ ಅಧಿಕೃತ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು.

ಒಬ್ಬ ಕ್ರೀಡಾಪಟು ಗರಿಷ್ಠ 3 ಸ್ಪರ್ಧೆಗಳಲ್ಲಿ ಮಾತ್ರ ಭಾಗವಹಿಸಬಹುದು (ಉದಾ: 1 ಟ್ರ್ಯಾಕ್ ಮತ್ತು 2 ಫೀಲ್ಡ್ ಅಥವಾ 2 ಟ್ರ್ಯಾಕ್ ಮತ್ತು 1 ಫೀಲ್ಡ್).
45 ವರ್ಷ ಮೇಲ್ಪಟ್ಟವರು ತಮ್ಮ ವಯೋಮಾನದ ವಿಭಾಗದಲ್ಲಿ ಮಾತ್ರ ಸ್ಪರ್ಧಿಸಬೇಕು. ಅವರು 45 ವರ್ಷದೊಳಗಿನವರ ಜೊತೆ ಸ್ಪರ್ಧಿಸಲು ಅವಕಾಶವಿಲ್ಲ.

ಕ್ರೀಡಾಪಟುಗಳು ತಮ್ಮ ವಸತಿ ವ್ಯವಸ್ಥೆಯನ್ನು ತಾವೇ ಮಾಡಿಕೊಳ್ಳಬೇಕೆಂದು ಸೂಚಿಸಲಾಗಿದೆ. ಸ್ಪರ್ಧೆ ಆರಂಭವಾಗುವ ಕನಿಷ್ಠ 1 ಗಂಟೆ ಮುಂಚಿತವಾಗಿ ಕ್ರೀಡಾಪಟುಗಳು ಹಾಜರಿರಬೇಕು. ಸಂಗೀತ ಮತ್ತು ನೃತ್ಯ ಸ್ಪರ್ಧೆಗಳಲ್ಲಿ ಚಲನಚಿತ್ರ ಗೀತೆಗಳಿಗೆ ಅವಕಾಶವಿಲ್ಲ. ಸ್ಪರ್ಧಾಳುಗಳು ತಮ್ಮದೇ ಆದ ಸಲಕರಣೆಗಳನ್ನು ತರಬೇಕು.ರಾಜ್ಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸುವ ನೌಕರರಿಗೆ ನಿಯಮದಂತೆ ವಿಶೇಷ ಸಾಂದರ್ಭಿಕ ರಜೆ (OOD) ಮತ್ತು ಪ್ರಯಾಣ ಭತ್ಯೆ ಸೌಲಭ್ಯಗಳು ಲಭ್ಯವಿರುತ್ತವೆ.

ಸ್ಪರ್ಧೆಯ ವೇಳೆ ಅಶಿಸ್ತಿನಿಂದ ವರ್ತಿಸುವ ನೌಕರರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಇಲಾಖೆಯು ಎಚ್ಚರಿಸಿದೆ. ರಾಜ್ಯದಾದ್ಯಂತ ಇರುವ ಪ್ರತಿಭಾವಂತ ನೌಕರರು ಈ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಭಾಗವಹಿಸುವಂತೆ ಕೋರಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now