ಜಾತಿ ಗಣತಿ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವೇ ಇಲ್ಲ : ಪ್ರಹ್ಲಾದ್ ಜೋಶಿ

1 Min Read

ಹುಬ್ಬಳ್ಳಿ : ರಾಜ್ಯ ರಾಜಕಾರಣದಲ್ಲಿ ಜನಗಣತಿಯ ವಿಚಾರವೂ ಬಾರೀ ಸದ್ದು ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಜಾತಿಗಣತಿ ಸ್ವೀಕರಿಸುವ ಬಗ್ಗೆ ಮಾತನಾಡಿದ್ದಾರೆ. ಜಾತಿ ಗಣತಿ ಸ್ವೀಕಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಹ ಒಪ್ಪಿಗೆ ಸೂಚಿಸಿಲ್ಲ. ಇದರ ನಡುವೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜನಗಣತಿ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವೇ ಇಲ್ಲ. ಇದು ಕೇಂದ್ರ ಸರ್ಕಾರದ ಕೆಲಸ ಎಂದಿದ್ದಾರೆ.

ಕೇಂದ್ರ ಸರ್ಕಾರದ ಕೆಲಸವನ್ನು ನಾವೂ ಮಾಡುತ್ತೇವೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಜಾತಿಗಣತಿ ವರದಿಯ ಪತ್ರ ಮಾಯಾವಾಗಿದೆ ಎಂದು ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರೇ ಪತ್ರ ಬರೆದಿದ್ದಾರೆ. ಈ ವಿಚಾರದ ಬಗ್ಗೆ ಸರ್ಕಾರದಲ್ಲಿಯೇ ಸಹಮತವಿಲ್ಲ. ಡಿಕೆ ಶಿವಕುಮಾರ್, ಶಾಮನೂರು ಶಿವಶಂಕರಪ್ಪ ಅವರಿಂದಾನೇ ವಿರೋಧವಿದೆ. ಈ ಕುರಿತು ವರದಿ ಜಾರಿಯಾಗಬಾರದೆಂದು ಪಕ್ಷದಲ್ಲಿಯೇ ವಿರೋಧವಿದೆ.

ಸರ್ಕಾರದಲ್ಲಿ ಗೊಂದಲ, ಭಿನ್ನಾಭಿಪ್ರಾಯ ಇರುವಾಗಲೇ ವರದಿ ಹೇಗೆ ಸಲ್ಲಿಸುತ್ತಾರೆ. ಕೆಲ ಶಾಸಕರನ್ನು ಎತ್ತಿಕಟ್ಟಿ, ಸಿಎಂ ಸಿದ್ದರಾಮಯ್ಯ ತಮ್ಮ ಪಾರುಪತ್ಯ ಮೆರೆಯುತ್ತಿದ್ದಾರೆ. ಜನರ ಹಿತದೃಷ್ಟಿಯಿಂದ ಸರ್ಕಾರ, ಸರಿಯಾಗಿ ನಡೆಸಬೇಕು. ಆದರೆ ಸಿದ್ದರಾಮಯ್ಯ 20 ಶಾಸಕರನ್ನು ಮೈಸೂರಿಗೆ ಕಳುಹಿಸುವ ಪ್ರಯತ್ನ ಮಾಡಿದ್ದಾರೆ. ಇನ್ನು ಹಲವು ಶಾಸಕರು ವಿದೇಶ ಪ್ರವಾಸದಲ್ಲಿದ್ದಾರೆ. ಈ ರೀತಿಯ ಗೊಂದಲ ಸೃಷ್ಟಿಸಿರುವುದು ಸರಿಯಲ್ಲ. ಜಾತಿಗಣತಿ ವಿಚಾರದಲ್ಲೂ ಇದೇ ಗೊಂದಲ ಸೃಷ್ಟಿಸಿವೆ. ಜನ ಐದು ವರ್ಷ ಅಧಿಕಾರ ನೀಡಿದ್ದು, ಗೊಂದಲದ ಕೆಲಸಗಳಿಲ್ಲದೆ ಕೆಲಸ ಮಾಡಲಿ ಎಂದು. ಜನತಾ ದರ್ಶನ, ಜ‌ನ ಸಂಪರ್ಕ ಕಾರ್ಯಕ್ರಮಗಳು ನಿಂತು ಹೋಗಿವೆ ಎಂದು ಕಿಡಿಕಾರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *