Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸೌದಿ ಅರೇಬಿಯಾದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರದಿಂದ ಸಹಾಯವಾಣಿ ಆರಂಭ

---Advertisement---

ಬೆಂಗಳೂರು: ಸೌದಿ ಅರೇಬಿಯಾದಲ್ಲಿ ವಿಮಾನ ಹಾರಾಟದಲ್ಲಿ ದಿಢೀರ್ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ, ಕರ್ನಾಟಕದ ಸುಮಾರು 600ಕ್ಕೂ ಹೆಚ್ಚು ಉಮ್ರಾ ಯಾತ್ರಿಕರು ಅಲ್ಲಿಯೇ ಸಿಲುಕಿಕೊಂಡಿದ್ದಾರೆ. ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಸಹಾಯವಾಣಿ ಸಂಖ್ಯೆ ಬಿಡುಗಡೆ ಮಾಡಿದೆ.

ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ಪ್ರಾಧಿಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಸೌದಿ ಅರೇಬಿಯಾದಲ್ಲಿ ಸಿಲುಕಿರುವ ಕನ್ನಡಿಗರೊಂದಿಗೆ ನಾವಿದ್ದೇವೆ; ನಿಮ್ಮ ಸುರಕ್ಷಿತ ವಾಪಸಾತಿಯೇ ನಮ್ಮ ಸರ್ಕಾರದ ಮೊದಲ ಆದ್ಯತೆ” ಎಂದು ರಾಜ್ಯ ಸರ್ಕಾರ ಭರವಸೆ ನೀಡಿದೆ. ಯಾತ್ರಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲು ಹಾಗೂ ತ್ವರಿತವಾಗಿ ನೆರವು ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಯಾತ್ರಿಕರ ನೆರವಿಗೆ ಸಹಾಯವಾಣಿ ಆರಂಭ:

ಸಂಕಷ್ಟದಲ್ಲಿರುವ ಯಾತ್ರಿಕರು ಹಾಗೂ ಅವರ ಕುಟುಂಬಸ್ಥರ ನೆರವಿಗಾಗಿ ಸರ್ಕಾರವು ತುರ್ತು ಸಹಾಯವಾಣಿ ಸಂಖ್ಯೆಗಳನ್ನು ಪ್ರಕಟಿಸಿದೆ.

ಕರ್ನಾಟಕ ಹಜ್ ಇಲಾಖೆ: 9483503132, 7899707775

ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC): 1070 (ಟೋಲ್ ಫ್ರೀ), 080-22253707

ಅಧಿಕೃತ ಸೂಚನೆ ಪಾಲಿಸಲು ಮನವಿ

ವಿಮಾನಗಳ ಮರುಹೊಂದಾಣಿಕೆ ಮತ್ತು ಹಾರಾಟದ ನಿಖರ ಮಾಹಿತಿಗಾಗಿ ಪ್ರಯಾಣಿಕರು ತಮ್ಮ ವಿಮಾನಯಾನ ಸಂಸ್ಥೆಗಳು ಅಥವಾ ಟೂರ್ ಆಪರೇಟರ್‌ಗಳನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ. ಜೊತೆಗೆ ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಹಾಗೂ ಜೆಡ್ಡಾದಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಹೊರಡಿಸುವ ಅಧಿಕೃತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯ ಸರ್ಕಾರ ಯಾತ್ರಿಕರಲ್ಲಿ ಮನವಿ ಮಾಡಿದೆ.

Join WhatsApp

Join Now

Join Telegram

Join Now