Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಕಲ ಸರ್ಕಾರಿ ಗೌರವಗಳೊಂದಿಗೆ `ಸೂರಜ್ ಹೆಗಡೆ’ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಆದೇಶ

---Advertisement---

ಬೆಂಗಳೂರು: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ (ಬೆಂಗಳೂರು ವಿಭಾಗ-1) ಗೌರವಾನ್ವಿತ ಉಪಾಧ್ಯಕ್ಷರಾದ ಸೂರಜ್ ಹೆಗಡೆ ಅವರು ದಿನಾಂಕ 07.06.2026ರ ಭಾನುವಾರದಂದು ನಿಧನರಾಗಿದ್ದಾರೆ.

ಸೂರಜ್ ಹೆಗಡೆ ಅವರ ಹಠಾತ್ ನಿಧನಕ್ಕೆ ಕರ್ನಾಟಕ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದೆ. ಮೃತರ ಸೇವೆಯನ್ನು ಸ್ಮರಿಸಿರುವ ಸರ್ಕಾರವು, ಅವರಿಗೆ ಗೌರವ ಸಲ್ಲಿಸುವ ಸೂಚಕವಾಗಿ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಅಧಿಕೃತವಾಗಿ ಆದೇಶ ಹೊರಡಿಸಿದೆ.

ಈ ಕುರಿತು ಕರ್ನಾಟಕ ಸರ್ಕಾರದ ಸಚಿವಾಲಯದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು (ರಾಜ್ಯ ಶಿಷ್ಟಾಚಾರ) ದಿನಾಂಕ 08.06.2026 ರಂದು ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ರಾಜ್ಯಪಾಲರ ಆಜ್ಞಾನುಸಾರ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಬಾಣದರಂಗಯ್ಯ ಎನ್. ಆರ್. ಅವರು ಈ ಆದೇಶಕ್ಕೆ ಸಹಿ ಹಾಕಿದ್ದಾರೆ.

ಅಗಲಿದ ನಾಯಕನ ಗೌರವಾರ್ಥವಾಗಿ ಸಕಲ ಸರ್ಕಾರಿ ಮರ್ಯಾದೆಗಳೊಂದಿಗೆ ಅಂತ್ಯಸಂಸ್ಕಾರದ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಪೊಲೀಸ್ ಮಹಾನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಸರ್ಕಾರವು ಅಗತ್ಯ ನಿರ್ದೇಶನಗಳನ್ನು ನೀಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now