Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಸೇರಿ 11 ಜಿಲ್ಲೆಗಳಲ್ಲಿ ಬೆಂಬಲ ಬೆಲೆ ನೀಡಿ ಸೂರ್ಯಕಾಂತಿ ಖರೀದಿಗೆ ರಾಜ್ಯ ಸರ್ಕಾರ ಆದೇಶ

---Advertisement---

ಸುದ್ದಿಒನ್,ಚಿತ್ರದುರ್ಗ,ಮೇ.08:ರಾಜ್ಯದ ಸೂರ್ಯಕಾಂತಿ ಬೆಳೆಗಾರರ ಹಿತರಕ್ಷಣೆಗಾಗಿ 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿಯನ್ನು ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ಖರೀದಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರತಿ ಕ್ವಿಂಟಾಲ್ ಸೂರ್ಯಕಾಂತಿಗೆ 7,721 ರೂ. ದರ ನಿಗದಿಪಡಿಸಿ ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನ್ವಯ, ಸೂರ್ಯಕಾಂತಿ ಹೆಚ್ಚಾಗಿ ಬೆಳೆಯುವ ಈ ಕೆಳಗಿನ ಜಿಲ್ಲೆಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಖರೀದಿ ಕೇಂದ್ರಗಳನ್ನು ತೆರೆಯಲು ಸೂಚಿಸಲಾಗಿದೆ:

ಚಿತ್ರದುರ್ಗ, ಬೆಳಗಾವಿ, ಬಳ್ಳಾರಿ, ವಿಜಯಪುರ.

ಚಾಮರಾಜನಗರ, ಬಾಗಲಕೋಟೆ, ಗದಗ, ಕಲಬುರಗಿ.

ವಿಜಯನಗರ, ರಾಯಚೂರು ಹಾಗೂ ಧಾರವಾಡ.

ಖರೀದಿ ಪ್ರಕ್ರಿಯೆಯ ವಿವರಗಳು
ರೈತರಿಂದ ಪಾರದರ್ಶಕವಾಗಿ ಖರೀದಿ ನಡೆಸಲು ವಿವಿಧ ಸಂಸ್ಥೆಗಳನ್ನು ನೇಮಕ ಮಾಡಲಾಗಿದೆ. ಕೇಂದ್ರ ಸರ್ಕಾರದ ಸಂಸ್ಥೆಗಳು, ನಾಫೆಡ್‌ (NAFED) ಮತ್ತು ಎನ್‌ಸಿಸಿಎಫ್‌ (NCCF). ರಾಜ್ಯ ಸರ್ಕಾರದ ಸಂಸ್ಥೆ ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ.
ರೈತರ ನೋಂದಣಿಗೆ 50 ದಿನ ಹಾಗೂ ಖರೀದಿಗೆ 60 ದಿನಗಳ ಕಾಲಾವಕಾಶವನ್ನು ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯ ಜೊತೆಜೊತೆಗೇ ಖರೀದಿ ಪ್ರಕ್ರಿಯೆಯನ್ನೂ ಆರಂಭಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳು ಈ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ. ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ ವೈಜ್ಞಾನಿಕ ಗೋದಾಮುಗಳನ್ನು ಹೊಂದಿರುವ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಕೇಂದ್ರಗಳನ್ನು ತೆರೆಯಲು ಸೂಚಿಸಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now