Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಧಿಕಾರಕ್ಕೆ ಬಂದು ನಾಲ್ಕೇ ತಿಂಗಳಲ್ಲಿ ದಿವಾಳಿಯತ್ತ ರಾಜ್ಯ ಸರ್ಕಾರ : ಚಿತ್ರದುರ್ಗದಲ್ಲಿ ಸಿ.ಟಿ. ರವಿ ಹೇಳಿಕೆ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.16  : ಪಂಚಾಯಿತಿಗೊಂದು ಬಾರ್, ಪಂಚೆಗೊಂದು ಕ್ವಾಟರ್ ಕೊಡಲು ಹೊರಟಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕೆ ತಿಂಗಳಲ್ಲಿ ದಿವಾಳಿಯತ್ತ ಸಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರುದ್ದ ರಾಜ್ಯಾದ್ಯಂತ ಬಿಜೆಪಿ.ಯಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಧರಣಿಯ ಹಿನ್ನೆಲೆಯಲ್ಲಿ ಒನಕೆ ಓಬವ್ವ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಅಧಿಕಾರ ಉಳಿಸಿಕೊಳ್ಳಲು ಕಚ್ಚಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರುಗಳ ಕಾಟಕ್ಕೆ ರಾಜ್ಯದಲ್ಲಿ ರೈತರು, ಗುತ್ತಿಗೆದಾರರು ಬದುಕುವಂತಿಲ್ಲ. ಈಗಾಗಲೆ ನೂರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದ್ಯಾವುದನ್ನು ಲೆಕ್ಕಿಸದ ರಾಜ್ಯ ಸರ್ಕಾರ ಅಕ್ರಮವಾಗಿ ಹಣ ಸಂಗ್ರಹಿಸಿ ಪಂಚ ರಾಜ್ಯಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ರವಾನಿಸಲು ಹೊರಟಿದೆ. ಮಾಜಿ ಕಾರ್ಪೊರೇಟರ್ ಪತಿ ಅಂಬಿಕಾಪತಿಯವರ ಮನೆಯಲ್ಲಿ ಹಾಗೂ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಸಿಕ್ಕಿರುವ ಕಂತೆ ಕಂತೆ ಹಣ ಯಾರದ್ದು, ಇದಕ್ಕೆ ಹೊಣೆಗಾರರು ಯಾರು ಎನ್ನುವುದನ್ನು ಕಾಂಗ್ರೆಸ್‍ನವರೆ ಬಹಿರಂಗಪಡಿಸಬೇಕು ಎಂದು ಕಿಡಿಕಾರಿದರು.

ಮೈಸೂರಿನಲ್ಲಿ ನಡೆದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಹಣ ಲೂಟಿ ಹೊಡೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ನಿರ್ಮಿಸುವ ಅಪಾರ್ಟ್‍ಮೆಂಟ್‍ಗಳಲ್ಲಿ ಇಂತಿಷ್ಟು ಹಣ ನಿಗಧಿಪಡಿಸಿ ಸಂಗ್ರಹಣೆಯಲ್ಲಿ ತೊಡಗಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ಮಾತೆತ್ತಿದರೆ ಪ್ರಧಾನಿ ಮೋದಿ ಕಡೆ ಕೈತೋರಿಸಿ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳುವ ಪರಿಪಾಠ ಬೆಳೆಸಿಕೊಂಡಿದ್ದಾರೆ. ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಜಾರಿಗೆ ತಂದ ಯೋಜನೆಗಳನ್ನು ಬಿಟ್ಟರೆ ಕಾಂಗ್ರೆಸ್ ಯಾವುದೇ ಹೊಸ ಕಾಮಗಾರಿಗಳನ್ನು ಆರಂಭಿಸಿಲ್ಲ. ಇಂತಹ ಭ್ರಷ್ಟ ಸರ್ಕಾರಕ್ಕೆ ರಾಜ್ಯದ ಜನ ತಕ್ಕಪಾಠ ಕಲಿಸಲಿದ್ದಾರೆಂದು ಎಚ್ಚರಿಸಿದರು.

ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಮಾತನಾಡಿ ರಾಜ್ಯದಲ್ಲಿ ಕುರ್ಚಿ ಉಳಿಸಿಕೊಳ್ಳುವ ಪೈಪೋಟಿಯಲ್ಲಿ ತೊಡಗಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಇವರುಗಳಿಂದ ರಾಜ್ಯಕ್ಕೆ ಏನೂ ಉಪಯೋಗವಿಲ್ಲ. ಭದ್ರಾಮೇಲ್ದಂಡೆ ಯೋಜನೆಗಾಗಿ ನಮ್ಮ ಸರ್ಕಾರ 5300 ಕೋಟಿ ರೂ.ಗಳನ್ನು ಘೋಷಿಸಿದೆ. ಬಿಡುಗಡೆಯೂ ಮಾಡುತ್ತದೆ. ಆದರೆ ನೀವುಗಳು ಕಮಿಷನ್ ಹೊಡೆಯಲು ಕಾಯುತ್ತೀದ್ದೀರ ಎಂದು ಖಾರವಾಗಿ ಪ್ರಶ್ನಿಸಿದರು?

ತುಮಕೂರು, ಚಿತ್ರದುರ್ಗ, ದಾವಣಗೆರೆ ನೇರ ರೈಲು ಮಾರ್ಗ ಯೋಜನೆಗೂ ಹಣ ಬಿಡುಡೆಯಾಗಿಲ್ಲ. ದಲಿತರಿಗಾಗಿ ಮೀಸಲಿಟ್ಟಿದ್ದ ಹನ್ನೊಂದುವರೆ ಸಾವಿರ ಕೋಟಿ ರೂ.ಗಳನ್ನು ಬೇರೆ ಉದ್ದೇಶಕ್ಕೆ ಬಳಸಿರುವುದು ಯಾವ ಪುರುಷಾರ್ಥಕ್ಕಾಗಿ ದಲಿತರ ಮತಗಳನ್ನು ಸೆಳೆಯಲು ಹೊರಟಿದ್ದೀರ ರಾಜ್ಯದ ಜನ ನಿಮ್ಮನ್ನು ಕ್ಷಮಿಸುವುದಿಲ್ಲ. ಪ್ರಧಾನಿ ಮೋದಿ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಟ್ಟು ರಾಜ್ಯದ ಅಭಿವೃದ್ದಿ ಕಡೆ ಗಮನ ಕೊಡಿ. ಕತ್ತಲೆ ಭಾಗ್ಯದಿಂದ ಜನರಿಗೆ ಮುಕ್ತಿ ಯಾವಾಗ ಎಂದು ಕೇಳಿದರು.

ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡುತ್ತ ಪಂಚ ರಾಜ್ಯಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಹಣ ಸಂಗ್ರಹಿಸಲು ಹೊರಟಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರುಗಳಿಂದ ಜನ ಯಾವ ಅಭಿವೃದ್ದಿಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಚುನಾವಣೆ ಪೂರ್ವದಲ್ಲಿಯೇ ಉಚಿತ ಗ್ಯಾರೆಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ರೈತರಿಗೆ ಗುಣಮಟ್ಟದ ವಿದ್ಯುತ್ ನೀಡುತ್ತಿಲ್ಲ. ಬೆಂಗಳೂರಿನಲ್ಲಿ ಮಾಜಿ ಕಾರ್ಪೊರೇಟರ್ ಹಾಗೂ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಕೋಟಿಗಟ್ಟಲೆ ಹಣ ಸಿಕ್ಕಿರುವುದು ಯಾರಿಗೆ ಸೇರಿದ್ದು ಎನ್ನುವುದು ತನಿಖೆಯಾಗಬೇಕಿದೆ. ರಾಜ್ಯದಲ್ಲಿ ಬಿಜೆಪಿ.ಸರ್ಕಾರ ಅಧಿಕಾರದಲ್ಲಿದ್ದಾಗ ಜಾರಿಗೆ ತಂದ ಯೋಜನೆಗಳನ್ನು ಉದ್ಘಾಟಿಸುತ್ತಿರುವ ಕಾಂಗ್ರೆಸ್‍ನವರು ಉಚಿತ ಭಾಗ್ಯಗಳಿಗೆ ಹಣ ಹೊಂದಿಸಲು ಆಗದೆ ಪರದಾಡುತ್ತಿದ್ದಾರೆಂದು ಟೀಕಿಸಿದರು.

ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಹಾಗೂ ಸೋನಿಯಾಗಾಂಧಿಯನ್ನು ಖುಷಿಪಡಿಸುವುದಕ್ಕಾಗಿ ರಾಜ್ಯ ಸರ್ಕಾರ ರಾತ್ರೋರಾತ್ರಿ ತಮಿಳುನಾಡಿಗೆ ನೀರು ಹರಿಸಿ ರಾಜ್ಯದಲ್ಲಿರುವ ಜಲಾಶಯಗಳನ್ನು ಖಾಲಿ ಮಾಡಿರುವ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರುಗಳಿಗೆ ಸಲ್ಲುತ್ತದೆ. ಮೇಕೆದಾಟಿಗಾಗಿ ತಮಿಳುನಾಡು ವಿರುದ್ದ ಪಾದಯಾತ್ರೆ ನಡೆಸಿದ ಈಗಿನ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಆರು ಕೋಟಿ ಜನರಿಗೆ ಅವಮಾನಗೊಳಿಸುತ್ತಿದ್ದಾರೆ. ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಎಲ್ಲಾ ಜಲಾಶಯಗಳೂ ಭರ್ತಿಯಾಗಿದ್ದವು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕೆ ತಿಂಗಳಲ್ಲಿ ಬೋರ್‍ಗಳು ಒಣಗಿವೆ ಎಂದು ಲೇವಡಿ ಮಾಡಿದರು.

ಉಚಿತ ಗ್ಯಾರೆಂಟಿ, ಭಾಗ್ಯಗಳ ಹೆಸರಿನಲ್ಲಿ ರಾಜ್ಯದ ಜನರಿಗೆ ಕಾಂಗ್ರೆಸ್ ಸರ್ಕಾರ ಟೋಪಿ ಹಾಕಿದೆ. ಬಿಜೆಪಿ.ಸರ್ಕಾರ ಕೊಟ್ಟಿದ್ದ ಕೃಷಿ ಸಮ್ಮಾನ್, ರೈತ ಮಕ್ಕಳ ವಿದ್ಯಾಸಿರಿ ಯೋಜನೆಯನ್ನು ಕಾಂಗ್ರೆಸ್ ಕಿತ್ತಾಕಿದೆ. ಐದು ರಾಜ್ಯಗಳ ಚುನಾವಣೆಗೆ ಕೋಟಿಗಟ್ಟಲೆ ಹಣ ಸಂಗ್ರಹಿಸುತ್ತಿದ್ದು, ಬಾಕ್ಸ್‍ಗಟ್ಟಲೆ ನೋಟುಗಳ ಶೇಖರಣೆಯಾಗುತ್ತಿದೆ. ಎಸ್ಸಿ, ಎಸ್ಟಿ,ಗಾಗಿಯೇ ಬಿಜೆಪಿ. ಬಜೆಟ್‍ನಲ್ಲಿ ಮೀಸಲಿಟ್ಟಿದ್ದ ಹನ್ನೊಂದುವರೆ ಸಾವಿರ ಕೋಟಿ ರೂ.ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕಡಿತಗೊಳಿಸಿದ್ದು, ಏಕೆ. ಭದ್ರಾಮೇಲ್ದಂಡೆ ಯೋಜನೆ ಸ್ಥಬ್ದವಾಗಿದೆ. ನಿಗಧಿತ ಅವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸದಿದ್ದರೆ ಜಿಲ್ಲೆಯಿಂದ ಲಕ್ಷಾಂತರ ಜನ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆಂದು ಎಚ್ಚರಿಸಿದರು.

ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಮಾತನಾಡಿ, ಇಂತಹ ಭ್ರಷ್ಠ ಸರ್ಕಾರವನ್ನು ಹಿಂದೆಂದು ಕಂಡಿರಲಿಲ್ಲ. ರೈತರು ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲು ಹರಸಾಹಸಪಡುತ್ತಿದ್ದಾರೆ. ಬೆಲೆ ಏರಿಕೆಯಿಂದ ಜನಸಾಮಾನ್ಯರು ಕಂಗಾಲಾಗಿದ್ದರೆ. ಮೊದಲೆ ಬರಗಾಲಕ್ಕೆ ತುತ್ತಾಗಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆಯುವ ಕೆಲಸ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಜಿಲ್ಲೆಗೆ ನೀರಾವರಿ ಯೋಜನೆಯನ್ನು ಜಾರಿಗೆ ತಂದು ರೈತರ ಹೊಲಗಳಿಗೆ ನೀರು ಹರಿಸಲಿ ಎಂದು ಒತ್ತಾಯಿಸಿದರು.

ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ಉಪಾಧ್ಯಕ್ಷ ಸಂಪತ್‍ಕುಮಾರ್, ಪ್ರಧಾನ ಕಾರ್ಯದರ್ಶಿ ಜೈಪಾಲ್, ಭೀಮಸಮುದ್ರದ ಯುವ ಮುಖಂಡರುಗಳಾದ ಜಿ.ಎಸ್.ಅನಿತ್‍ಕುಮಾರ್, ರಘುಚಂದನ್, ನಗರಾಧ್ಯಕ್ಷ ನವೀನ್ ಚಾಲುಕ್ಯ, ಗ್ರಾಮಾಂತರ ಅಧ್ಯಕ್ಷ ಕಲ್ಲೇಶಯ್ಯ, ಎ.ರೇಖ, ದಗ್ಗೆ ಶಿವಪ್ರಕಾಶ್, ನಂದಿ ನಾಗರಾಜ್, ಶ್ಯಾಮಲಶಿವಪ್ರಕಾಶ್, ರೈತ ಮೋರ್ಚ ಜಿಲ್ಲಾಧ್ಯಕ್ಷ ವೆಂಕಟೇಶ್‍ಯಾದವ್, ಮಲ್ಲಿಕಾರ್ಜುನ್, ಮಾಧುರಿಗಿರೀಶ್, ಶಿವಣ್ಣಾಚಾರ್, ನರೇಂದ್ರ, ಶಾಂತಮ್ಮ, ಕಾಂಚನ, ಕಿರಣ್, ಶಿವಣ್ಣಾಚಾರ್, ಹೇಮಂತ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!