Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆಶಿ ಬೆಂಬಲಿಗರ ಮೇಲಿನ 62 ಕೇಸ್ ವಾಪಾಸ್ ಪಡೆದ ರಾಜ್ಯ ಸರ್ಕಾರ

---Advertisement---

 

ಬೆಂಗಳೂರು: 2019ರಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರನ್ನು ಬಂಧಿಸಿದ್ದರು. ಅದೇ ವೇಳೆ ದಾಂಧಲೆ ನಡೆಸಿದ್ದ ಬೆಂಬಲಿಗರ ವಿರುದ್ಧ ಸಾತನೂರು, ಕೋಡಿಹಳ್ಳಿ ಸೇರಿ ರಾಮನಗರ ಜಿಲ್ಲೆಯ ನಾನಾ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ, ರೈತ ಮುಖಂಡರು, ನಾನಾ ಸಂಘಟನೆಗಳ ಮುಖಂಡರ ವಿರುದ್ಧದ ಮೊಕದ್ದಮೆಗಳನ್ನು ಕೈಬಿಡಲು ಸರ್ಕಾರ ನಿರ್ಧಾರ ಮಾಡಿದೆ.

ಸಿಎಂ ಸಿದ್ದರಾಮಯ್ಯ ಅವರ ಕ್ಯಾಬಿನೆಟ್ ಈ ನಿರ್ಧಾರವನ್ನ ತೆಗೆದುಕೊಂಡಿದೆ. ಡಿಕೆ ಶಿವಕುಮಾರ್ ಅವರ ಬೆಂಬಲಿಗರ ವಿರುದ್ಧ ಪ್ರಕರಣ ಸೇರಿ 12 ಪ್ರಕರಣ ಸೇರಿ, 62 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಅದೆಲ್ಲವೂ ಇದೀಗ ಕೈಬಿಡಲಾಗುತ್ತಿದೆ. ಆದರೆ ಇದರ ನಡುವೆ ಕೇಸ್ ವಾಪಾಸ್ ಗೆ ಪೊಲೀಸ್ ಇಲಾಖೆ ಹಾಗೂ ಕಾನೂನು ಇಲಾಖೆಯಿಂದ ವಿರೋಧವಿದೆ. ಆದರೂ ರಾಜ್ಯ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ಸಂಪುಟ ಸಭೆಯ ಟಿಪ್ಪಣಿಯಲ್ಲಿ ಎರಡು ಇಲಾಖೆಗಳ ಅಭಿಪ್ರಾಯ ಕೇಳಲಾಗಿತ್ತು. ಈ ವೇಳೆ ಇವರು ವಾಪಾಸ್ ಪಡೆಯಲು ಅರ್ಹವಾದ ಪ್ರಕರಣಗಳಲ್ಲ ಎಂದು ಡಿಜಿ ಮತ್ತು ಐಜಿಪಿ ಅಭಿಪ್ರಾಯ ಪಟ್ಟರೆ, ಸಾರ್ವಜನಿಕ ಹಿತಾಸಕ್ತಿ ಇಲ್ಲ, ಕೇಸ್ ಹಿಂದಕ್ಕೆ ಪಡೆಯಲು ಸೂಕ್ತ ಅಲ್ಲ ಎಂದು ಕಾನೂನು ಇಲಾಖೆ ಅಭಿಪ್ರಾಯ ಪಟ್ಟಿದೆ. ಆದಾಗ್ಯೂ ಎರಡೂ ಇಲಾಖೆಯ ಅಭಿಪ್ರಾಯ ಬದಿಗೊತ್ತಿ ಸಂಪುಟ ಸಭೆಯಲ್ಲಿ ಕೇಸ್ ವಾಪಸ್‌ಗೆ ಗ್ರೀನ್‌ ಸಿಗ್ನಲ್‌ ನೀಡಲಾಗಿದೆ.

ಒಟ್ಟು 62 ಪ್ರಕರಣಗಳನ್ನು ವಾಪಾಸ್ ಪಡೆಯುವುದಕ್ಕೆ ಕ್ಯಾಬಿನೆಟ್ ನಲ್ಲಿ ನಡೆದ ಸಭೆಯಲ್ಲಿಯೇ ನಿರ್ಧಾರ ಮಾಡಲಾಗಿದೆ. ಒಂದಷ್ಟು ವಿರೋಧದ ನಡಿವೆಯೂ ಕ್ರಿಮಿನಲ್ ಪ್ರಜತಣದಿಂದ ಮುಕ್ತರಾಗಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಿತ್ರದುರ್ಗ ಜಿಲ್ಲೆಯಾದ್ಯಂತ ಡಿ.ಜೆ, ಹೈ-ಡೆಸಿಬಲ್ ಧ್ವನಿವರ್ಧಕಗಳ ಬಳಕೆಗೆ ಸಂಪೂರ್ಣ ನಿಷೇಧ: ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಆದೇಶ

ಚಿತ್ರದುರ್ಗ ಮುಖ್ಯ ರಸ್ತೆ ಅಗಲೀಕರಣ : ಭೂಸ್ವಾಧೀನ, ಕಟ್ಟಡ ಪರಿಹಾರದ ನಿಖರ ಮಾಹಿತಿ ಸಂಗ್ರಹಿಸಲು ಸಚಿವ ಟಿ. ರಘುಮೂರ್ತಿ ಸೂಚನೆ

ಗೌರಿ-ಗಣೇಶ ಹಬ್ಬದ ಮೆರವಣಿಗೆಯಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್, ಪಟಾಕಿ/ಸಿಡಿಮದ್ದು ಬಳಕೆ ನಿಷೇಧ: ಚಿತ್ರದುರ್ಗ ಜಿಲ್ಲಾಧಿಕಾರಿ ಆದೇಶ

ಗೋನೂರು ಕೆರೆಯಲ್ಲಿ ಭದ್ರೆಗೆ ಸಿಎಂ ಗಂಗಾಪೂಜೆ, ಬಾಗಿನ: ಅಗತ್ಯ ಸಿದ್ಧತೆಗೆ ಸಚಿವ ಟಿ. ರಘುಮೂರ್ತಿ ಸೂಚನೆ

ಕೆಲಸ ಮಾಡಲು ಇಷ್ಟವಿರದಿದ್ದರೆ ಬಿಟ್ಟುಬಿಡಿ : ಚಿತ್ರದುರ್ಗ ಜಿಲ್ಲಾಸ್ಪತ್ರೆ ಅಧಿಕಾರಿಗಳಿಗೆ ಸಚಿವ ರಘುಮೂರ್ತಿ ಎಚ್ಚರಿಕೆ

ವಿದ್ಯಾ ನಗರದಲ್ಲಿ 18 ನೇ ವರ್ಷದ ಗಣೇಶೋತ್ಸವ : ‘ವಿ ಬಾಯ್ಸ್’ ವತಿಯಿಂದ ರಕ್ತದಾನ ಶಿಬಿರ: ಸಾರ್ಥಕತೆ ಮೆರೆದ ಯುವಪಡೆ.!

Leave a Comment