Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ಸರ್ಕಾರ ರೈತರನ್ನು ನಿರ್ಲಕ್ಷ ಧೋರಣೆಯಿಂದ ನೋಡುತ್ತಿದೆ : ಚಿತ್ರದುರ್ಗದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ನ. 07 :  ರಾಜ್ಯದಲ್ಲಿ ಆವರಿಸಿರುವ ಭೀಕರ ಬರದಿಂದ ರೈತರು ಬಳಲಿ ಹೋಗಿದ್ದು, ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕೊಡಿಸಲು ಭಾರತೀಯ ಜನತಾ ಪಕ್ಷ ಕೈಗೊಂಡಿರು ಬರ ಅಧ್ಯಯನ ತಂಡ ಮಂಗಳವಾರ ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಹೋಬಳಿಯ ಕೊಳಾಳ್ ಗ್ರಾಮಕ್ಕೆ ಭೇಟಿ ನೀಡಿತ್ತು.

ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದ ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕರಾದ ಎಂ.ಚಂದ್ರಪ್ಪ, ಕೆ.ಎಸ್.ನವೀನ್, ಮಾಜಿ ಶಾಸಕರಾದ ಜಿ.ಹೆಚ.ತಿಪ್ಪಾರೆಡ್ಡಿ, ಬಿ.ಪಿ.ಹರೀಶ್, ರಾಮಚಂದ್ರ, ಮುರುಳಿ ಅವರ ತಂಡ ಮಂಗಳವಾರ ಭರಮಸಾಗರ ಹೋಬಳಿಯ ಕೊಳಾಳ್ ಗ್ರಾಮದ ಚೌಡೇಶ್ವರಿ ದೇವಸ್ಥಾನದ ಸುತ್ತಮತ್ತಲಿನ ಸುಮಾರು 8 ಸಾವಿರ ಎಕರೆ ಮೆಕ್ಕೆಜೋಳ ಬೆಳೆ ನಷ್ಟವಾಗಿದ್ದು, ಗ್ರಾಮದ ಲೋಕೇಶ್ ಅವರ ಜಮೀನಿಗೆ ಭೇಟಿ ನೀಡಿ ಅಲ್ಲಿನ ಮೆಕ್ಕೆಜೋಳ ಬೆಳೆಯನ್ನು ವಿಕ್ಷಣೆ ಮಾಡಿದರು.

ಸಾವಿರಾರು ರೂ.ಗಳಗಳನ್ನು ಖರ್ಚು ಮಾಡಿ ಹುಳಮೆ ಮಾಡಲಾಗಿದೆ. ಆದರೆ ಈ ಭಾರೀ ಮಳೆ ಬಾರದ ಕಾರಣ ಬೆಳೆ ನಷ್ಟ ಆಗಿದೆ. ಸಾಲ ಮಾಡಿ ಹುಳಮೆ ಮಾಡಲಾಗಿದೆ. ಹಾಕಿದ ಬಂಡವಾಳವನ್ನು ಕಾಣದ ಸ್ಥಿತಿ ಎದುರಾಗಿದೆ ಎಂದು ರೈತ ಲೋಕೇಶ್ ತಮ್ಮ ಅಳಲು ತೋಡಿಕೊಂಡರು.

ನಂತರ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ, ರಾಜ್ಯವು ಎಂದೂ ಕಾಣದಂತಹ ಭೀಕರ ಬರವನ್ನು ಎದುರಿಸುತ್ತಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಹಾಗೂ ಅವರ ಸಚಿವ ಸಂಪುಟ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಕಚ್ಚಾಟ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರವನ್ನು ಎಚ್ಚರಿಸಿ ರೈತರ ಸಮಸ್ಯೆಗಳನ್ನು ಈಡೇರಿಸಲು ಭಾರತೀಯ ಜನತಾ ಪಕ್ಷ 17 ತಂಡಗಳನ್ನು ಮಾಡಿಕೊಂಡು ಪ್ರವಾಸ ಮಾಡುತ್ತಿದ್ದೆವೆ ಎಂದರು.

ಶೇಕಡ 30% ಮಾತ್ರ ಮಳೆ ಆಗಿದ್ದು, ಸಂಪೂರ್ಣ ರಾಜ್ಯವೇ ಬರ ಆವರಿಸಿದೆ. ರೈತರಿಗೆ ಆಗಿರುವ ನಷ್ಟ. ಜನ ಜಾನುವಾರುಗಳ ಸ್ಥಿತಿಗತಿ ಭೀಕರವಾಗಿದೆ. ಆದರೂ ಕೂಡ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್  ಸರ್ಕಾರ ರೈತರನ್ನು ಅತ್ಯಂತ ನಿರ್ಲಕ್ಷ ಧೋರಣೆಯಿಂದ ನೋಡುತ್ತಿದೆ ಇದರ ವಿರುದ್ದವಾಗಿ ಬಿಜೆಪಿ ಜನಪರ ಧ್ವನಿ ಎತ್ತಬೇಕು ಎಂದು ಬರ ಅಧ್ಯಯನ ಮಾಡುತ್ತಿದ್ದು, ಸಿದ್ದರಾಮಯ್ಯ ಈಗ ಎಚ್ಚೆತ್ತುಕೊಂಡು, ಸಚಿವರಿಗೆ ಪ್ರವಾಸ ಮಾಡಲು ಹೇಳಿದ್ದಾರೆ. ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ವಿದ್ಯುತ್ ಕ್ಷಾಮ ಹೆಚ್ಚಿದೆ ಎಂಬುದು ಗೊತ್ತಿದ್ದರು ಈಗ 7 ಗಂಟೆ ವಿದ್ಯುತ್ ನೀಡುವುದಾಗಿ ಹೇಳಿರುವ ಮುಖ್ಯಮಂತ್ರಿಗಳು ಜನರ, ರೈತರ ಹಾಗೂ ಜಾನುವಾರುಗಳ ಸ್ಥಿತಿಗತಿಯನ್ನು ಅರಿತು ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment