Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೇಂದ್ರದ ವಿರುದ್ಧ ರಾಜ್ಯ ಸರ್ಕಾರದ ಪ್ರತಿಭಟನೆ : ಮುಖ್ಯಾಂಶಗಳು…!

---Advertisement---

 

ನವದೆಹಲಿ, ಫೆಬ್ರವರಿ 07: ಕೇಂದ್ರ ಸರ್ಕಾರ ಮಲತಾಯಿ ಧೋರಣೆಯಿಂದಾಗಿ 2017-18 ರಿಂದ ಕರ್ನಾಟಕಕ್ಕೆ 1,87,867 ಕೋಟಿ ರೂ.ಗಳ ನಷ್ಟವಾಗಿದ್ದು ಇದರಿಂದ ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಅವಕಾಶವನ್ನು ತಪ್ಪಿಸಿದಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಕರ್ನಾಟಕ ಮತ್ತು ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ಎಸಗಿರುವ ಆರ್ಥಿಕ ದೌರ್ಜನ್ಯದ ಕೇಂದ್ರ ದ ವಿರುದ್ಧ ಜಂತರ್ ಮಂತರ್ ನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು, ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲಿನ ಹಂಚಿಕೆಯಲ್ಲಿ ಇಳಿಕೆ, ಮೂಲಸೌಕರ್ಯ ಬದ್ಧತೆಗಳ ಈಡೇರಿಕೆಯಲ್ಲಿ ಮತ್ತು ಕೇಂದ್ರ ಸರ್ಕಾರದಿಂದ ವಿಪತ್ತು ನಿರ್ವಹಣೆಗೆ ಅನುದಾನ ಬಿಡುಗಡೆಯಲ್ಲಿನ ವಿಳಂಬದ ಕುರಿತು ಸವಿಸ್ತಾರವಾಗಿ ಮಾತನಾಡಿದ ಅವರು, ಇದು ಕನ್ನಡಿಗರ ಅಸ್ಮಿತೆಯ ಮೇಲಾಗುತ್ತಿರುವ ವ್ಯವಸ್ಥಿತ ದಾಳಿ ಎಂದು ವ್ಯಾಖ್ಯಾನಿಸಿದರು. ಕೇಂದ್ರದ ನಿರ್ಲಕ್ಷ್ಯದಿಂದ ಕನ್ನಡಿಗರಿಗೆ ತೊಂದರೆಯುಂಟಾಗುತ್ತಿರುವುದು ಗಾಬರಿ ಹುಟ್ಟಿಸುವಂತಿದೆ. ಕನ್ನಡಿಗರ ಹಿತಾಸಕ್ತಿಯನ್ನು ಕೇಂದ್ರ ಬಿಜೆಪಿ ನಾಯಕರು ದುರ್ಬಲಗೊಳಿಸುತ್ತಿದ್ದಾರೆ. ಸಂವಿಧಾನದೆಡೆಗೆ ಹಾಗೂ ಮತ್ತು ಸಹಕಾರಿ ಒಕ್ಕೂಟದೆಡೆಗೆ ಅವರ ಬದ್ಧತೆ ಇಲ್ಲವಾಗಿದೆ ಎಂದರು.

 

ಕೇಂದ್ರ ತೆರಿಗೆಯಲ್ಲಿ ಕರ್ನಾಟಕ ರಾಜ್ಯದ ಪಾಲಿನಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಸುದೀರ್ಘವಾಗಿ ವಿವರಿಸಿದ ಮುಖ್ಯಮಂತ್ರಿಗಳು, 14 ನೇ ಹಣಕಾಸು ಆಯೋಗದಿಂದ 4.71% ರಿಂದ 15 ನೇ ಹಣಕಾಸು ಆಯೋಗದಲ್ಲಿ 3,64% ಗೆ ಇಳಿಕೆಯಾಗಿರುವುದು ಕಳೆದ 5 ವರ್ಷಗಳಲ್ಲಿ ಅಂದಾಜು ರೂ.62,098 ಕೋಟಿಗಳಷ್ಟು ನಷ್ಟವಾಗಲು ಕಾರಣವಾಗಿದೆ. ವರದಾನವೆಂದೇ ಬಣ್ಣಿಸಲಾದ ಜಿ.ಎಸ್.ಟಿ ಅನುಷ್ಠಾನವು ಜೂನ್ 2022 ರಲ್ಲಿ ನಿಲ್ಲಿಸಲಾದ ಪರಿಹಾರದಿಂದಾಗಿ ಶಾಪವಾಗಿ ಪರಿಣಮಿಸಿದೆ. ಈ ಹಠಾತ್ ನಿಲುಗಡೆಯಿಂದ ನಮ್ಮ ಹಣಕಾಸು ಪರಿಸ್ಥಿತಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದ್ದು, ನಾವು ಹೆಮ್ಮೆಯಿಂದ ನಿರ್ವಹಿಸುತ್ತಿದ್ದ ಶೇ 15% ಬೆಳವಣಿಗೆ ದರವನ್ನು ನಿರ್ವಹಿಸುವುದನ್ನು ಕಷ್ಟಕರವಾಗಿದೆ. ಜಿ.ಎಸ್.ಟಿ ಯ ಅವೈಜ್ಞಾನಿಕ ಅನುಷ್ಠಾನದಿಂದಾಗಿ ಕರ್ನಾಟಕ 59,274 ಕೋಟಿ ರೂ.ಗಳ ನಷ್ಟವನ್ನು ಅನುಭವಿಸಿದೆ ಎಂದರು.

 

ಜಿ.ಎಸ್.ಟಿ ಪರಿಹಾರದ ಕುರಿತು ಮಾಹಿತಿ ಕೋರಿ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಗೆ ಮೂರು ಪತ್ರಗಳನ್ನು ರಾಜ್ಯ ಸರ್ಕಾರ ಬರೆದಿದೆ. ಆದರೆ ದುರದೃಷ್ಟವಶಾತ್ ಅವರಿಂದ ಯಾವುದೇ ಉತ್ತರ ಬಂದಿಲ್ಲ. ಪ್ರತಿ ವರ್ಷ 4,30,000 ಕೋಟಿ ರೂ.ಗಳ ತೆರಿಗೆ ರಾಜಸ್ವವನ್ನು ಸಂದಾಯ ಮಾಡುತ್ತಿದ್ದರೂ, ಕೇಂದ್ರ ಸರ್ಕಾರದಿಂದ ರೂ. 50,000 ಕೋಟಿ ರೂ.ಗಳನ್ನು ಮಾತ್ರ ಪಡೆಯುತ್ತಿದ್ದೇವೆ ಎಂದರು.

 

ದುರದೃಷ್ಟವಶಾತ್ , ಕರ್ನಾಟಕ ನೀಡುವ ಪ್ರತಿ 100 ರೂ.ಗಳಿಗೆ ಕೇವಲ 12- 13 ರೂ.ಗಳನ್ನು ಮಾತ್ರ ಪಡೆಯುತ್ತಿದೆ.ಈ ಅಸಮಾನ ಹಂಚಿಕೆಯಿಂದಾಗಿ ನಮ್ಮ ಅಭಿವೃದ್ಧಿ ಮತ್ತು ಕಲ್ಯಾಣ ಕಾರ್ಯಕ್ರಮಗಳಿಗೆ ನಾವೇ ಅನುದಾನ ಹೊಂದಿಸಿಕೊಳ್ಳಲು ನೇರ ಹೊಡೆತ ಕೊಟ್ಟಂತಾಗಿದೆ ಎಂದರು. ಕೇಂದ್ರ ಸರ್ಕಾರದ ಆಯವ್ಯಯವು ಕಳೆದ 5 ವರ್ಷಗಳಲ್ಲಿ ದುಪ್ಪಟ್ಟಾಗಿದ್ದರೂ ಕರ್ನಾಟಕದ ಹಂಚಿಕೆ ಮಾತ್ರ ಅರ್ಧದಷ್ಟಾಗಿದೆ. 2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ 24, 42,213 ಕೋಟಿ ರೂ.ಗಳಾಗಿದ್ದರೆ , ಕರ್ನಾಟಕಕ್ಕೆ 46,288 ಕೋಟಿ ರೂ.ಗಳ ಒಟ್ಟು ಅನುದಾನ ದೊರಕಿತು. 2023-24 ರಲ್ಲಿ ಕೇಂದ್ರ ಬಜೆಟ್ 45,03,097 ಕೋಟಿಗಳಷ್ಟಾದರೂ ಕರ್ನಾಟಕಕ್ಕೆ ಮಾತ್ರ 50, 257 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ನ್ಯಾಯ ಎಲ್ಲಿದೆ ? ನ್ಯಾಯವಾಗಿ ನಮಗೆ ಒಂದು ಲಕ್ಷ ಕೋಟಿ ರೂ.ಗಳಿಗಿಂತ ಹೆಚ್ಚು ಮೊತ್ತ ಬರಬೇಕಿದ್ದು , ಆದರೆ ಅದರ ಅರ್ಧದಷ್ಟು ಮಾತ್ರ ದೊರೆತಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment