Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆ. 28 ರಂದು ತುಮಕೂರಿನಲ್ಲಿ ರಾಜ್ಯ ಮಟ್ಟದ ಭೋವಿ ಜನ ಜಾಗೃತಿ ಸಮಾವೇಶ : ಹೆಚ್.ಭೀಮರಾಜ್

Facebook
Twitter
Telegram
WhatsApp

ವರದಿ ಮತ್ತು ಫೋಟೋ : ಸುರೇಶ್ ಪಟ್ಟಣ್,                         ಮೊ : +91 87220 22817

ಚಿತ್ರದುರ್ಗ (ಆ. 22) :  ರಾಷ್ಟ್ರೀಯ ಶ್ರೀ ಸಿದ್ದರಾಮೇಶ್ವರ ಓಡ್ ಯುವ ವೇದಿಕೆವತಿಯಿಂದ ಆ. 28 ರಂದು ತುಮಕೂರಿನ ಅಮಾನಿಕೆರೆ ಗಾಜಿನ ಮನೆಯಲ್ಲಿ ರಾಜ್ಯ ಮಟ್ಟದ ಭೋವಿ ಜನ ಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಉಪಾಧ್ಯಕ್ಷರಾದ ಹೆಚ್.ಭೀಮರಾಜ್ ತಿಳಿಸಿದರು.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಕಲ್ಲು ಒಡೆಯುವ ಕಟ್ಟಡ ಕಟ್ಟುವ ಮಣ್ಣು ಅಗೆಯುವ ಶ್ರಮದ ಕಾಯಕ ಜೀವಿಗಳಾಗಿರುವ ಭೋವಿ ಜನಾಂಗದಲ್ಲಿ ಜನ ಜಾಗೃತಿಯನ್ನು ಮೂಡಿಸುವ ಸಲುವಾಗಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಬಂಡವಾಳ ಶಾಹಿಗಳ ವ್ಯವಸ್ಥೆಯಲ್ಲಿ ಈ ಹಿಂದೆ ಕಲ್ಲು ಗಣೀಗಾರಿಕೆಯನ್ನು ನಡೆಸುತ್ತಿದ್ದ ಭೂವಿ ಜನಾಂಗದವರು ಇಂದು ಕೂಲಿಯಾಳುಗಳಾಗಿ ಜೀವನ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕೂಲಿಯಾಳಾಗಿರುವ ಒಡ್ಡರು ಗಣಿ ಮಾಲಿಕರನ್ನಾಗಿ ಮಾಡಬೇಕು, ರಾಜಕೀಯವಾಗಿ, ಶೈಕ್ಷಣಿಕವಾಗಿ ಅವರನ್ನು ಮೇಲ್ಮಟ್ಟಕ್ಕೆ ತೆಗೆದುಕೊಂಡು ಹೋಗುವ ಸಮಾವೇಶ ಇದಾಗಬೇಕಿದೆ ಎಂದರು.

ಸಮಾವೇಶದ ಸಾನಿಧ್ಯವನ್ನು ಚಿತ್ರದುರ್ಗ ಮತ್ತು ಬಾಗಲಕೋಟೆಯ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮಶ್ವರ ಶ್ರೀಗಳು ವಹಿಸಲಿದ್ದಾರೆ.

ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡೆಯೂರಪ್ಪ, ಸಿದ್ದರಾಮಯ್ಯ, ಕಾಂಗ್ರೇಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವರಾದ ನಾರಾಯಣಸ್ವಾಮಿ, ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ, ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಉಮೇಶ್ ಕತ್ತಿ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ತೋಟಗಾರಿಕೆ ಸಚಿವ ಮುನಿರತ್ನಂ, ಸಹಕಾರ ಸಚಿವ ಸೋಮಶೇಖರ್, ಶಿಕ್ಷಣ ಸಚಿವ ನಾಗೇಶ್, ಮುಖ್ಯಮಂತ್ರಿಗಳ ಪ್ರದಾನ ಕಾರ್ಯದರ್ಶೀಗಳಾದ ಮಂಜುನಾಥ್ ಪ್ರಸಾದ್, ಶಾಸಕರುಗಳಾದ ಅರವಿಂದ ಲಿಂಬಾವಳಿ, ಚಂದ್ರಪ್ಪ, ರಘು, ಅಖಂಡ ಶ್ರೀನಿವಾಸ್ ಮೂರ್ತಿ, ವೆಂಕಟರಮಣಪ್ಪ, ಗೂಳಿಹಟ್ಟಿ ಡಿ.ಶೇಖರ್, ಹುಲಿಗೇರಿ ಮಾಜಿ ಸಂಸದರಾದ ಜನಾರ್ಧನ ಸ್ವಾಮಿ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.

ಈ ಸಮಾವೇಶಕ್ಕೆ ಚಿತ್ರದುರ್ಗದಿಂದ ಸುಮಾರು 10 ಸಾವಿರ ಜನರು ಹೋಗಲಿದ್ದು, ಅಲ್ಲಿ ಸುಮಾರು 30 ದಿಂದ 40 ಸಾವಿರ ಜನತೆ ಭಾಗವಹಿಸುವ ನಿರೀಕ್ಷೆ ಇದೆ. ಇದೇ ಸಂದರ್ಭದಲ್ಲಿ ಮಂಜುನಾಥ್ ಪ್ರಸಾದ್ ರವರು ಸೇರಿದಂತೆ ಇತರೆ 10 ಜನರಿಗೆ ವಿವಿಧ ರೀತಿಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುವುದು. ಸಮಾವೇಶದಲ್ಲಿ ಭಾಗವಹಿಸುವ ವಿವಿಧ ಚುನಾಯತ ಪ್ರತಿನಿಧಿಗಳಿಗೆ ಸನ್ಮಾನ ಮಾಡಲಾಗುವುದು. ಇದರಲ್ಲಿ ಪಕ್ಷಾತೀತವಾಗಿ ಸಮಾಜದ ಮುಖಂಡರು ಬಾಂಧವರು ಭಾಗವಹಿಸಲಿದ್ದಾರೆ ಎಂದು ಭೀಮರಾಜ್ ತಿಳಿಸಿದರು.
ಗೋಷ್ಟಿಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ.ನಾಗರಾಜ್ ಭೋವಿ ಚಿತ್ರದುರ್ಗ. ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಪಿ.ಭರತ್ ಸಮಾಜದ ಬಾಂಧವರಾದ ವೇಣುಗೋಪಾಲ್, ಹನುಮಂತಪ್ಪ, ಗಂಗಾಧರ್, ವಕೀಲರಾದ ರುದ್ದೇಶ್, ಪ್ರಕಾಶ್, ಮಾರುತಿ, ಚಂದ್ರಶೇಖರ್, ಧನಂಜಯ, ಪಾಳ್ಯದ ಮಾರುತಿ, ಮಹಾಂತೇಶ್, ದೇವರಾಜ್ ಸೇರಿದಂತರ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಜೀರ್ಣ, ಮಲಬದ್ಧತೆ ಸಮಸ್ಯೆನ್ನು ಎಂದಿಗೂ ನಿರ್ಲಕ್ಷಿಸಬೇಡಿ : ಇದು ಹೃದಯಕ್ಕೆ ತೊಂದರೆ

ನಮ್ಮ ದೇಹದಲ್ಲಿ ಸಣ್ಣ ಪುಟ್ಟ ಸಮಸ್ಯೆಯಾದರೂ ಕೆಲವೊಂದು ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ. ಸುಮಾರು ಜನಕ್ಕೆ ಅಜೀರ್ಣ ಹಾಗೂ ಮಲಬದ್ಧತೆಯ ಸಮಸ್ಯೆ ಕಾಡುತ್ತಿರುತ್ತದೆ. ಇದು ಕಾಮನ್ ತಾನೇ ಎಂದು ನಿರ್ಲಕ್ಷ್ಯ ಮಾಡಿದರೆ ಅದರಿಂದ ಮುಂದೆ ಹೃದಯಕ್ಕೆ

ಈ ರಾಶಿಯವರಿಗೆ ಅಡಚಣೆ ಸಮಸ್ಯೆದಿಂದ ಬೇಸತ್ತು ಜೀವನದಲ್ಲಿ ಜಿಗುಪ್ಸೆ

ಈ ರಾಶಿಯವರಿಗೆ ಅಡಚಣೆ ಸಮಸ್ಯೆದಿಂದ ಬೇಸತ್ತು ಜೀವನದಲ್ಲಿ ಜಿಗುಪ್ಸೆ: ಈ ರಾಶಿಯವರಿಗೆ ಒಳ್ಳೆಯ ಸಂಬಂಧ ಮದುವೆಗೆ ಒಲೆಯಲಿದೆ ಶುಕ್ರವಾರರಾಶಿ ಭವಿಷ್ಯ -ನವೆಂಬರ್-22,2024 ಸೂರ್ಯೋದಯ: 06:29, ಸೂರ್ಯಾಸ್ತ : 05:35 ಶಾಲಿವಾಹನ ಶಕೆ -1946 ಸಂವತ್-2080

ಗೋಲ್ಡ್ ರೇಟ್ ಇಂದು ಕೂಡ ಹೆಚ್ಚಳ : ಗ್ರಾಂಗೆ ಎಷ್ಟು ಏರಿಕೆ ಆಯ್ತು..?

ಬೆಂಗಳೂರು: ಚಿನ್ನ ಬೆಳ್ಳಿಯ ಬೆಲೆಯಲ್ಲಿ ಹಾವು ಏಣಿಯ ಆಟ ಕೆಲ ದಿನದಿಂದ ಕಾಣಿಸ್ತಾ ಇದೆ. ಹಾವು ಮೇಲೇರಿದಂತೆ ಚಿನ್ನದ ಬೆಲೆ ಸರಸರನೆ ಏರುತ್ತಲೆ ಇದೆ. ಇಂದು ಕೂಡ ಇಳಿಕೆಯಾಗದೆ ಏರಿಕೆಯತ್ತಲೇ ಮುಖ ಮಾಡಿದೆ. ಹಾಗಾದ್ರೆ

error: Content is protected !!