ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕೌಶಲ್ಯ ಬೆಳೆಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇವರ ಸಂಯುಕ್ತಾಶ್ರಯದಲ್ಲಿ ಈ ವರ್ಷ ತುಮಕೂರಿನಲ್ಲಿ ಮಕ್ಕಳಿಗಾಗಿ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ, ಸಾಂಸ್ಕೃತಿಕ ಶಿಬಿರ ಆಯೋಜಿಸಲಾಗಿದ್ದು, ಚಿತ್ರದುರ್ಗ ಜಿಲ್ಲೆಯಿಂದ ಸಹ ಆಸಕ್ತ ವಿದ್ಯಾರ್ಥಿಗಳು ಭಾಗವಹಿಸಬಹುದು ಎಂದು ಚಿತ್ರದುರ್ಗ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಯೋಗೀಶ್ ಸಹ್ಯಾದ್ರಿ ತಿಳಿಸಿದ್ದಾರೆ.
ತುಮಕೂರಿನ ಕೊರಟಗೆರೆ ತಾಲ್ಲೂಕಿನ ಶ್ರೀ ಕ್ಷೇತ್ರ ಸಿದ್ಧರಬೆಟ್ಟದಲ್ಲಿ ಏಪ್ರಿಲ್ 30 ರಿಂದ ಮೇ 02 ರ ವರೆಗೆ ಮೂರು ದಿನಗಳ ಕಾಲ ಶಿಬಿರ ನಡೆಯಲಿದೆ. ನಾಡಿನ ಖ್ಯಾತ ಸಾಹಿತಿಗಳು, ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ ಮಕ್ಕಳಿಗೆ ಸಾಹಿತ್ಯ, ಸಂಸ್ಕೃತಿ, ಕಲೆ ಯೋಗ, ಚಾರಣ, ಚಿತ್ರ ಕಲೆ, ಜಾನಪದ, ಸಂಗೀತ, ವಿಜ್ಞಾನ, ಭಾಷೆ ಹಾಗೂ ನಾಟಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತರಬೇತಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
6 ನೇ ತರಗತಿಯಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಶಿಬಿರದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಊಟ, ವಸತಿ ವ್ಯವಸ್ಥೆ ಇರಲಿದೆ. ಮಕ್ಕಳು ಲಘು ಹೊದಿಕೆ, ಹಾಸಿಗೆ, ತಟ್ಟೆ, ಲೋಟ ಹಾಗೂ ದಿನಬಳಕೆಯ ವಸ್ತುಗಳನ್ನು ಸ್ವತಃ ತರಬೇಕು. ಚಿತ್ರದುರ್ಗ ಜಿಲ್ಲೆಯಿಂದ ಭಾಗವಹಿಸಲು ಆಸಕ್ತಿ ಇರುವ ವಿದ್ಯಾರ್ಥಿಗಳು ಚಿತ್ರದುರ್ಗ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಯೋಗೀಶ್ ಸಹ್ಯಾದ್ರಿ (9972240239), ಉಪಾಧ್ಯಕ್ಷ ಬಿ. ವಿಜಯ್ ಕುಮಾರ್ (96867 24546), ಕಾರ್ಯದರ್ಶಿ ಮಾರುತಿ ನಾಯ್ಕ್ (9986336164) ಇವರನ್ನು ಸಂಪರ್ಕಿಸಿ ಹೆಸರುಗಳನ್ನು ನೋಂದಾಯಿಸಬಹುದು ಎಂದು ಮಸಾಪ ಜಿಲ್ಲಾಧ್ಯಕ್ಷ ಯೋಗೀಶ್ ಸಹ್ಯಾದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











