ಬೆಂಗಳೂರಿನಲ್ಲಿ ಫೆಬ್ರವರಿ 26 ಮತ್ತು 27ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ

1 Min Read

ಚಿತ್ರದುರ್ಗ, ಫೆ.14:‌‌‌‌  ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ರಾಜ್ಯ ಮಟ್ಟದ ಬೃಹತ್ ಉದ್ಯೋಗಮೇಳ-2024 ವನ್ನು ಇದೇ ಫೆಬ್ರವರಿ 26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರು

http://skillconnect.kaushalkar.com

ಗೆ ಭೇಟಿ ನೀಡಿ ರಿಜಿಸ್ಟರ್-ಉದ್ಯೋಗ ಮೇಳ-ಅಭ್ಯರ್ಥಿಯ ನೋಂದಣಿ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು.

ಅಭ್ಯರ್ಥಿಗಳ ಮತ್ತು ಉದ್ಯೋಗದಾತರ ನೋಂದಣಿ ಹಾಗೂ ಉದ್ಯೋಗ ಮೇಳದಲ್ಲಿ ಭಾಗವಹಿಸಲು ತಾಲ್ಲೂಕು ಹಾಗೂ ಜಿಲ್ಲಾಮಟ್ಟದ ಅಧಿಕಾರಿ, ಸಿಬ್ಬಂದಿಗಳು ತಮ್ಮ ವ್ಯಾಪ್ತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಮೇಳದ ಮಾಹಿತಿ ಪ್ರಚಾರ ಮಾಡಬೇಕು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ  1800 599 9918 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *