Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆರ್. ಸತ್ಯಣ್ಣನವರಿಗೆ  ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿ ಪ್ರದಾನ

---Advertisement---

ಸುದ್ದಿಒನ್,ಚಿತ್ರದುರ್ಗ, ಜುಲೈ .16 : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಬೀದರ್‌ನ ಡಾ.ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಚಿತ್ರದುರ್ಗದ ಕೋಟೆ ವಾಯುವಿಹಾರಿಗಳ ಸಂಘದ ಅಧ್ಯಕ್ಷ ಆರ್.ಸತ್ಯಣ್ಣ ಇವರಿಗೆ ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕೋಟೆ ವಾಯುವಿಹಾರಿಗಳ ಸಂಘದ ಅಧ್ಯಕ್ಷರಾಗಿ ಹತ್ತಾರು ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿರುವ ಆರ್.ಸತ್ಯಣ್ಣ ಕೋಟೆಗೆ ಬರುವ ಪ್ರವಾಸಿಗಳಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯಕ್ಕಾಗಿ ಅನೇಕ ಬಾರಿ ಪುರಾತತ್ವ ಇಲಾಖೆಗೆ ಮನವಿ ಸಲ್ಲಿಸಿ ರಾಜ್ಯ ಹಾಗೂ ಕೇಂದ್ರ ಮಂತ್ರಿಗಳ ಮೇಲೆ ಒತ್ತಡ ಹೇರಿದ್ದರು.

 

ಕೋಟೆಯೊಳಗಿರುವ ನವಿಲುಗಳಿಗೆ ದಿನವೂ ಆಹಾರ ಧಾನ್ಯಗಳನ್ನು ಪೂರೈಸಿಕೊಂಡು ಬರುತ್ತಿರುವುದಲ್ಲದೆ ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿರುವ ಇವರ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಕಾಯಕ ಯೋಗಿ ಪ್ರಶಸ್ತಿ ನೀಡಿ ಸನ್ಮಾನಿಸಿತು.

ರಾಜ್ಯದ 34 ಜಿಲ್ಲೆಗಳಿಂದಲೂ ಒಬ್ಬೊಬ್ಬ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಿದೆ. ಅನುಭವ ಮಂಟಪ ಬಸವ ಕಲ್ಯಾಣದ ನಾಡೋಜ ಡಾ.ಬಸವಲಿಂಗ ಪಟ್ಟ ದೇವರು, ಬೆಲ್ದಾಳದ ಸಿದ್ದರಾಮ ಶರಣರು ಸಾನಿಧ್ಯ ವಹಿಸಿದ್ದರು. ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯಾಧ್ಯಕ್ಷ ಹುಲಿಕಲ್ ನಟರಾಜ್, ಚಿತ್ರದುರ್ಗ ಜಿಲ್ಲಾಧ್ಯಕ್ಷ ನಾಗರಾಜ್ ಸಂಗಮ್, ಬೇರೆ ಬೇರೆ ಜಿಲ್ಲೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಶಾಸಕರು, ವಿಧಾನಪರಿಷತ್ ಸದಸ್ಯರುಗಳು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...