Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಅಕ್ಟೋಬರ್‌ 14 ಮತ್ತು 15 ರಂದು ದೊಡ್ಡಬಳ್ಳಾಪುರದಲ್ಲಿ ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿರ

---Advertisement---

 

ವರದಿ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.12  : ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿರ ಅಕ್ಟೋಬರ್‌ 14 ಮತ್ತು 15 ರಂದು ದೊಡ್ಡಬಳ್ಳಾಪುರದ ಸ್ಕೌಟ್ ಕ್ಯಾಂಪ್ ಬೆಸೆಂಟ್ ಪಾರ್ಕ್‍ನಲ್ಲಿ ನಡೆಯಲಿದೆ.

ಅಕ್ಟೋಬರ್ 14 ರಂದು ಬೆಳಿಗ್ಗೆ 9-30 ಕ್ಕೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಗೌರವಾಧ್ಯಕ್ಷ ಡಾ.ಎ.ಎಸ್.ಕಿರಣ್‍ಕುಮಾರ್ ಶಿಬಿರ ಉದ್ಗಾಟಿಸಲಿದ್ದಾರೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ವಿಜ್ಞಾನ ಗ್ರಾಮ ನೀಲನಕ್ಷೆ ಉದ್ಗಾಟಿಸುವರು.

ನನ್ನೊಳಗಿನ ನಾನು, ಪರಿಷತ್ತು ಧ್ಯೇಯ ಬೆಳವಣಿಗೆ ಮತ್ತು ಉತ್ಸಾಹ-ಯಶಸ್ಸು, ಕಾಯಕದ ಪ್ರಸ್ತುತತೆ, ಪರಿಷತ್ತಿನ ಮುಂದಿನ ಗುರಿ-ಬಲವರ್ಧನೆ, ಅಮೃತಾ ಅಮಾವಾಸ್ಯೆ, ಸಮೂಹ ಮಾಧ್ಯಮ ಚಿತ್ತ-ಎತ್ತ, ನಾನೂ ಮಹಿಳೆ ನನ್ನ ನಡಿಗೆ ಎತ್ತ ವಿಚಾರಗೋಷ್ಠಿ ನಡೆಯಲಿದೆ. ಸಂಜೆ ನಾಲ್ಕು ಗಂಟೆಗೆ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಮಾತನಾಡುವರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಪ್ರಶಸ್ತಿ ಪತ್ರ ವಿತರಿಸುವರು.
ಡಾ.ಸೋಮಶೇಖರ್ ಎಂ.ವಿ. ನೆನಪಿನ ಕಾಣಿಕೆ ವಿತರಿಸಲಿದ್ದಾರೆ.

ಚಿತ್ರದುರ್ಗ ಜಿಲ್ಲೆಯಿಂದ ಹನ್ನೆರಡು ಜನ ಶಿಬಿರದಲ್ಲಿ ಭಾಗವಹಿಸಲಿದ್ದಾರೆಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಜಿಲ್ಲಾಧ್ಯಕ್ಷ ನಾಗರಾಜ್ ಸಂಗಂ, ಉಪಾಧ್ಯಕ್ಷ ಕಿರಣ್‍ಶಂಕರ್, ಕಾರ್ಯದರ್ಶಿ ಪಿ.ಲೋಕೇಶ್, ಸಂಘಟನಾ ಕಾರ್ಯದರ್ಶಿ ಎಂ.ರಂಗಪ್ಪ, ಖಜಾಂಚಿ ಬಸಣ್ಣ ಇವರುಗಳು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...